LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಯುವ ಆಟಗಾರ ಪಾದಾರ್ಪಣೆ: ಟೀಮ್ ಇಂಡಿಯಾ ಪ್ಲೇಯಿಂಗ್ 11

ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ ಟೆಸ್ಟ್ ಪಂದ್ಯ ಶುರುವಾಗಿದೆ. ಮುಲ್ಲನ್‌ಪುರ್‌ನ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ಶುಭ್‌ಮನ್ ಗಿಲ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಅಫ್ಘಾನಿಸ್ತಾನ್ ತಂಡ ಮೊದಲು ಬೌಲಿಂಗ್ ಮಾಡಲಿದೆ.ಇನ್ನು ಈ ಪಂದ್ಯದ ಮೂಲಕ 23 ವರ್ಷದ ಯುವ ಸ್ಪಿನ್ನರ್ ಮಾನವ್ ಸುತಾರ್ ಟೀಮ್ ಇಂಡಿಯಾ ಪರ ಪಾದಾರ್ಪಣೆ ಮಾಡಿದ್ದಾರೆ. ಅದರಂತೆ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ.
ಭಾರತ (ಪ್ಲೇಯಿಂಗ್ XI): ಕೆಎಲ್ ರಾಹುಲ್, ಯಶಸ್ವಿ ಜೈಸ್ವಾಲ್, ಸಾಯಿ ಸುದರ್ಶನ್, ಶುಭ್‌ಮನ್ ಗಿಲ್ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್, ವಾಷಿಂಗ್ಟನ್ ಸುಂದರ್, ಮಾನವ್ ಸುತಾರ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.ಅಫ್ಘಾನಿಸ್ತಾನ್ (ಪ್ಲೇಯಿಂಗ್ XI): ಸೇದಿಕುಲ್ಲಾ ಅಟಲ್, ರಹಮಾನುಲ್ಲಾ ಗುರ್ಬಾಝ್, ಅಬ್ದುಲ್ ಮಲಿಕ್, ರಹಮತ್ ಶಾ, ಹಶ್ಮತುಲ್ಲಾ ಶಾಹಿದಿ (ನಾಯಕ), ಅಫ್ಸರ್ ಝಜೈ(ವಿಕೆಟ್ ಕೀಪರ್), ಅಝ್ಮತುಲ್ಲಾ ಒಮಝಾಹಿ, ಶರಫುದ್ದೀನ್ ಅಶ್ರಫ್, ನಂಗಿಯಾಲೈ ಖರೋಟಿ, ಝಿಯಾವುರ್ ರಹಮಾನ್ ಶರೀಫಿ, ಮೊಹಮ್ಮದ್ ಶರೀಫಿ.8 ವರ್ಷಗಳ ಬಳಿಕ ಮುಖಾಮುಖಿ ಭಾರತ ಮತ್ತು ಅಫ್ಘಾನಿಸ್ತಾನ್ ತಂಡ ಈವರೆಗೆ ಒಂದು ಟೆಸ್ಟ್ ಪಂದ್ಯದಲ್ಲಿ ಮಾತ್ರ ಮುಖಾಮುಖಿಯಾಗಿದೆ. ಅದು ಸಹ 2018 ರಲ್ಲಿ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಇನಿಂಗ್ಸ್ ಹಾಗೂ 262 ರನ್‌ಗಳ ಜಯ ಸಾಧಿಸಿತ್ತು.ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದಿದ್ದ ಈ ಮ್ಯಾಚ್‌ನಲ್ಲಿ ಟಾಸ್ ಗೆದ್ದ ಅಂದಿನ ಟೀಮ್ ಇಂಡಿಯಾ ನಾಯಕ ಅಜಿಂಕ್ಯ ರಹಾನೆ ಬ್ಯಾಟಿಂಗ್ ಆಯ್ದುಕೊಂಡಿದ್ದರು.
ಇದೀಗ ಬರೋಬ್ಬರಿ 8 ವರ್ಷಗಳ ಬಳಿಕ ಉಭಯ ತಂಡಗಳು ಟೆಸ್ಟ್ ಕ್ರಿಕೆಟ್‌ನಲ್ಲಿ ಮತ್ತೊಮ್ಮೆ ಮುಖಾಮುಖಿಯಾಗಿದ್ದಾರೆ. ಈ ಬಾರಿ ಅಫ್ಘಾನ್ ಪಡೆ ಎದುರಿಸುತ್ತಿರುವುದು ಯಂಗ್ ಇಂಡಿಯಾವನ್ನು. ಹೀಗಾಗಿ ಉಭಯ ತಂಡಗಳಿAದ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು