LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಯುವಶಕ್ತಿ ಆದರ್ಶದ ದಾರಿಯಲ್ಲಿ ನಡೆಯಬೇಕು: ಡಾ. ಚಿಕ್ಕಹೆಜ್ಜಾಜಿ ಮಹದೇವ್

ಪೀಣ್ಯ ದಾಸರಹಳ್ಳಿ: ನಮ್ಮ ದೇಶವನ್ನು ಸದೃಢವಾಗಿ ಕಟ್ಟಬೇಕಾದ ಯುವಕರು ಬಲಿಷ್ಠರಾಗಬೇಕಿದೆ. ಆದರ್ಶದ ದಾರಿಯಲ್ಲಿ ಯುವ ಸಮೂಹ ಸಾಗಬೇಕು’ ಎಂದು ಸಾಹಿತಿ ಹಾಗೂ ಕನ್ನಡಪರ ಚಿಂತಕ ಡಾ. ಚಿಕ್ಕಹೆಜ್ಜಾಜಿ ಮಹಾದೇವ್ ತಿಳಿಸಿದರು.

ಚಿಕ್ಕಸಂದ್ರ ಹತ್ತಿರ ಬಿಜೆಪಿ ಯುವ ಮೋರ್ಚಾ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಯುವ ದಿನ ಹಾಗೂ ವಿವೇಕಾನಂದರ ಜಯಂತೋತ್ಸವ ಸಮಾರಂಭದಲ್ಲಿ ಮಾತನಾಡಿದರು.‘ಇಂದಿನ ಯುವಶಕ್ತಿ ಮಾದಕ ವ್ಯಸನಗಳಿಗೆ ಬಲಿಯಾಗದೆ ವಿವೇಕಾನಂದರ ಆದರ್ಶ ಮತ್ತು ದೇಶಪ್ರೇಮವನ್ನು ಮೈಗೂಡಿಸಿ ಕೊಳ್ಳಬೇಕಿದೆ’ ಎಂದರು.

ಶಾಸಕ ಎಸ್. ಮುನಿರಾಜು ಮಾತನಾಡಿ’ ವಿವೇಕಾನಂದರು 39 ವರ್ಷಗಳ ಕಾಲ ಬದುಕಿ ಇಡೀ ವಿಶ್ವಕ್ಕೆ ಉನ್ನತವಾದ ಅನೇಕ ಸಂದೇಶಗಳನ್ನು ಸಾರಿದ್ದಾರೆ. ಅವರು ತೋರಿದ ಹಾದಿಯಲ್ಲಿ ಯುವಶಕ್ತಿ ನಡೆಯಬೇಕಿದೆ’ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಜಿ.ಮರಿಸ್ವಾಮಿ, ಸೋಮಶೇಖರ್, ಗಂಗರಾಜು, ಕೃಷ್ಣಮೂರ್ತಿ,ಪಿ.ಎಚ್. ರಾಜು, ಗುರುಪ್ರಸಾದ್, ಸಾಹಿತಿ ವೈ.ಬಿ.ಎಚ್. ಜಯದೇವ್, ಎಂ.ಹೆಚ್. ಪಾಟೀಲ್, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಭರತ್ ಸೌಂದರ್ಯ, ಎಚ್ ಆರ್ ಪ್ರಕಾಶ್, ಸಪ್ತಗಿರಿ ಆನಂದ್, ವಿಜಯ್ ಕುಮಾರ್, ಭಾಗ್ಯಮ್ಮ, ಬಿ.ಟಿ. ಶ್ರೀನಿವಾಸ್, ವಿನೋದ್ ಗೌಡ, ಮುಂತಾದವರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು