ದೆಹಲಿ: ಲೋಕಸಭೆ ಚುನಾವಣೆ ಸ್ಪರ್ಧಿಸುವ ಬಗ್ಗೆ ನಾನು ಯಾವುದೇ ನಿರ್ಧಾರಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸ್ಪಷ್ಪಪಡಿಸಿದ್ದಾರೆ.
ಬೆಳಗಾವಿ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ಯಾಕೆ ನನ್ನ ಹೆಸರು ಕೇಳಿಬರುತ್ತಿದೆ ನನಗೆ ತಿಳಿದಿಲ್ಲ. ಪಕ್ಷದ ಹೈಕಮಾಂಡ್ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ.
ಎಂದಿರುವ ಅವರು ಇಂದು ನಡೆಯುತ್ತಿರುವ ಪಕ್ಷದ ಕಾರ್ಯಕಾರಿಣಿಸಭೆಯಲ್ಲಿ ಟಿಕೆಟ್ ಸಂಬಂಧ ಯಾವುದೇ ನಿರ್ಧಾರ ಕೈಗೊಳ್ಳುವುದಿಲ್ಲ. ಮತ್ತೊಮ್ಮೆ ಬಿಜೆಪಿ 400 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಸಂಬಂಧ ಇಂದಿನ ಸಭೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.