ಬೆಂಗಳೂರು: ನವೆಂಬರ್ ಕ್ರಾಂತಿಯ ಊಹಾಪೋಹಗಳು ಹೆಚ್ಚುತ್ತಿರುವ ಬೆನ್ನಲ್ಲೇ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ದೆಹಲಿಗೆ ಭೇಟಿನೀಡಿದ್ದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿಯಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿಲ್ಲ, ಮಾಡುತ್ತಲೂ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಎಲ್ಲಾ ಸುಳ್ಳು. ನಾನು ಯಾರನ್ನೂ ಭೇಟಿ ಮಾಡಿಲ್ಲ, ಭೇಟಿ ಮಾಡೋದೂ ಇಲ್ಲ ಎಂದು ಅವರು ಖಡಾಖಂಡಿತವಾಗಿ ಹೇಳಿದ್ದಾರೆ.
ದೆಹಲಿ ಭೇಟಿಯ ಮುಖ್ಯ ಉದ್ದೇಶ ರಾಜ್ಯದ ಪ್ರಮುಖ ಜಲ ವಿವಾದಗಳಾದ ಕಾವೇರಿ, ಮೇಕೆದಾಟು ಮತ್ತು ಕೃಷ್ಣಾ ನದಿ ವಿಚಾರಗಳ ಕುರಿತು ಚರ್ಚೆ ನಡೆಸುವುದಾಗಿತ್ತು ಎಂದು ಡಿಕೆಶಿ ಮಾಹಿತಿ ನೀಡಿದ್ದಾರೆ. ಮಹದಾಯಿ ವಿಚಾರದಲ್ಲೂ ಕೆಲವು ಅಂಶಗಳಿದ್ದು, ಸದ್ಯಕ್ಕೆ ಆ ಬಗ್ಗೆ ಮಾತನಾಡಲು ಬಯಸುವುದಿಲ್ಲ ಎಂದು ಹೇಳಿದ್ದಾರೆ. ಮಹದಾಯಿ ಯೋಜನೆಗೆ ಸಂಬAಧಿಸಿದAತೆ ಕೆಲವು ದಾಖಲೆಗಳನ್ನು ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದ್ದಾರೆ. ಬುಧವಾರ ರಾತ್ರಿ ದೆಹಲಿಯಲ್ಲೇ ತಂಗಿರುವ ಡಿಕೆ ಶಿವಕುಮಾರ್ ಇಂದು ಬೆಂಗಳೂರಿಗೆ ವಾಪಸಾಗಲಿದ್ದಾರೆ.



