ಧುರಂಧರ್ ಮತ್ತು `ಧುರಂಧರ್ ದಿ ರಿವೆಂಜ್’ ಎರಡೂ ಚಿತ್ರಗಳಲ್ಲಿ ಜಮಿಲ್ ಜಮಾಲಿ ಪಾತ್ರವನ್ನು ನಿರ್ವಹಿಸುವ ಮೂಲಕ ನಟ ರಾಕೇಶ್ ಬೇಡಿ ಅಪಾರ ಜನಪ್ರಿಯತೆಯನ್ನು ಗಳಿಸಿದ್ದಾರೆ. ಈ ಚಿತ್ರಗಳ ಐತಿಹಾಸಿಕ ಯಶಸ್ಸಿನ ನಂತರ, ಈಗ ನಿರ್ದೇಶಕ ಆದಿತ್ಯ ಧರ್ ಅವರಿಗೆ ಬೋನಸ್ ನೀಡಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಇದಕ್ಕೆ ಅವರ ಕಡೆಯಿಂದ ಸ್ಪಷ್ಟನೆ ಸಿಕ್ಕಿದೆ.ಆದಿತ್ಯ ಧಾರ್ ನಿರ್ದೇಶನದ `ಧುರಂಧರ್’ ಮತ್ತು `ಧುರಂಧರ್: ದಿ ರಿವೆಂಜ್’ ಎರಡೂ ಚಿತ್ರಗಳು ಗಲ್ಲಾಪೆಟ್ಟಿಗೆಯಲ್ಲಿ ಇತಿಹಾಸ ಸೃಷ್ಟಿಸಿವೆ. ಈ ಚಿತ್ರದೊಂದಿಗೆ ಸಂಬಂಧ ಹೊಂದಿರುವ ಪ್ರತಿಯೊಬ್ಬ ಕಲಾವಿದರು ಇದರಿಂದ ಪ್ರಯೋಜನ ಪಡೆಯುತ್ತಿದ್ದಾರೆ. ರಾಕೇಶ್ ಬೇಡಿ ಈ ಎರಡೂ ಚಿತ್ರಗಳಲ್ಲಿ `ಜಮೀಲ್ ಜಮಾಲಿ’ ಪಾತ್ರವನ್ನು ನಿರ್ವಹಿಸಿದ್ದಾರೆ. ಇದು ಅವರ ಜನಪ್ರಿಯತೆ ಹೆಚ್ಚಿಸಿದೆ. ನಿರ್ದೇಶಕ ಆದಿತ್ಯ ಧರ್ ಮತ್ತು ನಿರ್ಮಾಪಕರು ರಾಕೇಶ್ ಕೆಲಸದಿಂದ ತುಂಬಾ ಪ್ರಭಾವಿತರಾಗಿದ್ದಾರೆ. ತಮ್ಮ ಔದಾರ್ಯವನ್ನು ಪ್ರದರ್ಶಿಸಿ, ಅವರು ರಾಕೇಶ್ ಬೇಡಿ ಅವರಿಗೆ 1 ಕೋಟಿ ರೂಪಾಯಿ ಹೆಚ್ಚು ಹಣ ನೀಡಲಾಗಿದೆ ಎಂದು ವರದಿ ಆಗಿತ್ತು. ಇದಕ್ಕೆ ಉತ್ತರಿಸಿರುವ ಅವರು, `ನನ್ನ ಖಾತೆಗಂತೂ ಬಂದಿಲ್ಲ.ಎಲ್ಲಿ ಬಂದಿದೆ ಹೇಳಿ ಹೋಗಿ ತೆಗೆದುಕೊಂಡು ಬರುತ್ತೇನೆ’ ಎಂದು ಉತ್ತರಿಸಿದ್ದಾರೆ. ಅವರ `ಬಚ್ಚಾ ಹೈ ತು ಮೇರಾ’ ಎಂಬ ಸಂಭಾಷಣೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಅವರ ಅನೇಕ ಮೀಮ್ಸ್ಗಳು ಸಹ ವೈರಲ್ ಆಗುತ್ತಿವೆ. `ಧುರಂಧರ್: ದಿ ರಿವೆಂಜ್’ ಚಿತ್ರದಲ್ಲಿ ಅವರ ಪಾತ್ರಕ್ಕೆ ದೊಡ್ಡ ಟ್ವಿಸ್ಟ್ ಇತ್ತು. ಚಿತ್ರದಲ್ಲಿ ರಣವೀರ್ ಸಿಂಗ್, ಅರ್ಜುನ್ ರಾಂಪಾಲ್, ಸಂಜಯ್ ದತ್, ಆರ್. ಮಾಧವನ್, ಸಾರಾ ಅರ್ಜುನ್ ನಟಿಸಿದ್ದಾರೆ.



