ರಾಜ್ಯ ರಾಜಕಾರಣದಲ್ಲಿ ಅಧಿಕಾರ ಹಂಚಿಕೆಯ ಸದ್ದುಗದ್ದಲ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಈ ಸಂದರ್ಭದಲ್ಲಿ ಸಿಎಂ ಅಧಿಕಾರ ಹಂಚಿಕೆಯ ಸೂಕ್ಷ್ಮ ವಿಷಯದ ಬಗ್ಗೆ ಯಾವುದೇ ಸಾರ್ವಜನಿಕ ಅಥವಾ ಆಂತರಿಕ ಹೇಳಿಕೆಗಳನ್ನು ನೀಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಪಕ್ಷದ ಶಾಸಕರಿಗೆ ಎಚ್ಚರಿಕೆ ನೀಡಿದ್ದಾರೆ.
ಮಾಧ್ಯಮಗಳ ಮುಂದೆ ಶಾಸಕರು ತಮ್ಮ ಮನಸೋ ಇಚ್ಛೆ ಹೇಳಿಕೆಗಳನ್ನು ನೀಡುವುದರಿಂದ ಪಕ್ಷ ಮತ್ತು ಸರ್ಕಾರದೊಳಗೆ ಅನಗತ್ಯ ಗೊಂದಲ ಉಂಟಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆಯಲ್ಲಿ ಈ ನಿರ್ದೇಶನ ಬಂದಿದ್ದು, ಸಿಎಂ ತಮ್ಮ ಸಹೋದ್ಯೋಗಿಗಳಿಗೆ ಅಧಿಕಾರ ಹಂಚಿಕೆ ವ್ಯವಸ್ಥೆಗಳ ಬಗ್ಗೆ ಚರ್ಚಿಸುವುದನ್ನು ನಿಲ್ಲಿಸಿ. ಸಡಿಲ ಹೇಳಿಕೆಗಳನ್ನು ನೀಡುವ ಮೂಲಕ ಗೊಂದಲ ಸೃಷ್ಟಿಸಬೇಡಿ ಎಂದು ಸ್ಪಷ್ಟ ಸಂದೇಶ ನೀಡಿದ್ದಾರೆ ಎಂದು ತಿಳಿದುಬಂದಿದೆ.



