ಬೆಂಗಳೂರು: ತಾವು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿರು ವುದು ಯಾರ ಒತ್ತಡದಿಂದಲೂ ಅಲ್ಲ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಹೇಳಿದ್ದಾರೆ.
ಸುದ್ದಿಸಂಸ್ಥೆಯೊಂದರೊಂದಿಗೆ ಮಾತನಾಡಿರುವ ಅವರು, ಚುನಾವಣಾ ರಾಜಕೀಯ ನಿವೃತ್ತಿಗಾಗಿ ಒತ್ತಡ ಹೇರಲಾಗಿತ್ತು ಎಂಬ ಮಾಜಿ ಮುಖ್ಯಮಂತ್ರಿ ಬಿ.ಎಸ್ಯಡಿಯೂರಪ್ಪ ಅವರ ಹೇಳಿಕೆಗೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿರುವ ಸದಾನಂದಗೌಡರು ನಾನು ಈ ವಿಷಯಕ್ಕೆ ಸಂಬಂಧಪಟ್ಟಂತೆ ಯಡಿಯೂರಪ್ಪ ಅವರೊಂದಿಗೆ ಮಾತನಾಡಿದ್ದೇನೆ.
ನಾನು ಆ ರೀತಿ ಮಾತನಾಡಿಲ್ಲ. ಈ ಬಗ್ಗೆ ನಾನು ಸ್ಪಷ್ಟನೆ ನೀಡುತ್ತೇನೆ ಎಂದು ಅವರೇ ನನಗೆ ಕರೆ ಮಾಡಿ ಹೇಳಿದ್ದಾರೆ.
ನಾನು ಪಕ್ಷದ ಸಂಸದೀಯ ಮಂಡಳಿಯಲ್ಲಿ ಈ ವಿಷಯ ಚರ್ಚೆಯಾಗಿತ್ತೇ ಎಂದು ಅವರನ್ನು ಪ್ರಶ್ನಿಸಿದ್ದೇನೆ ಎಂದು ತಿಳಿಸಿದರು.
ನನ್ನ ಚುನಾವಣಾ ರಾಜಕೀಯ ನಿವೃತ್ತಿ ಬಗ್ಗೆ ಈಗಾಗಲೇ ನಾನು ಕಾರ್ಯಕರ್ತರ ಬಳಿ ಹೇಳಿದ್ದೆ ಎಂದು ಸ್ಪಷ್ಪಪಡಿಸಿರುವ ಸದಾನಂದಗೌಡರು ಹೈಕಮಾಂಡ್ ನನ್ನ ಮೇಲೆ ನಿವೃತ್ತಿ ಒತ್ತಡ ಹೇರಿಲ್ಲ ಎಂದು ತಿಳಿಸಿದ್ದಾರೆ.