ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಉಪಚುನಾವಣೆ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯ ಹಣ ಬಿಡುಗಡೆ ಬೇಡ ಎಂದು ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿದೆ.
ಗೌತಮ್ ಕುಮಾರ್ ಜೈನ್ ಎಂಬುವರು ಅರ್ಜಿ ಸಲ್ಲಿಸಿದ್ದು ಮತದಾರರ ಮೇಲೆ ಪ್ರಭಾವಬೀರಲು ಗ್ಯಾರಂಟಿ ಯೋಜನೆಯ ಬಾಕಿಯಿರುವ ಹಣವನ್ನು ಬಿಡುಗಡೆ ಮಾಡಲು ಪ್ರಯತ್ನ ನಡೆದಿದೆ. ಹಾಗಾಗಿ ಚುನಾವಣೆ ಮುಗಿಯುವವರೆಗೂ ಹಣ ಬಿಡುಗಡೆ ಬೇಡ ಎಂದು ಅರುಣ್ ಶ್ಯಾಮ್ ಎಂಬ ವಕೀಲರು ವಾದ ಮಂಡಿಸಿದ್ದಾರೆ.
ಈ ಮೊಕದ್ದಮೆಯನ್ನು ಇಂದೇ ವಿಚಾರಣೆಗೆ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿರುವ ಹಿನ್ನೆಲೆಯಲ್ಲಿ ಮಧ್ಯಾಹ್ನ 1 ಗಂಟೆಗೆ ವಿಚಾರಣೆ ನಿಗಧಿಯಾಗಿದೆ ಎಂದು ತಿಳಿದುಬಂದಿದೆ.
ಗ್ಯಾರಂಟಿ ಹಣ ಬಿಡುಗಡೆ ಬೇಡ



