ಬೆಂಗಳೂರು: ದಾವಣಗೆರೆ ದಕ್ಷಿಣ ಕ್ಷೇತ್ರದ ವಿಧಾನಸಭಾ ಕ್ಷೇತ್ರದಿಂದ ಉಪಚುನಾವಣೆಯಲ್ಲಿ ಆಯ್ಕೆ ಬಯಸಿ ಸಚಿವ ಎಸ್ಎಸ್ ಮಲ್ಲಿಕಾರ್ಜುನ ಅವರ ಪುತ್ರನಿಂದ ನಾಮಪತ್ರ ಸಲ್ಲಿಕೆಯಾಗಿದೆ. ಸಚಿವರ ಪುತ್ರ ಎಸ್ಎಸ್ ಶ್ಯಾಮನೂರು ಸಮರ್ಥ್ ಅವರು ಇಂದು ಅವರ ತಾಯಿ ಹಾಗೂ ತಮ್ಮ ಆಪ್ತರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಕೆಗೂ ಮುನ್ನ ಸ್ಥಳೀಯ ಕಲ್ಲೇಶ ದೇವಾಲಯದಲ್ಲಿ ಪಊಜೆ ಸಲ್ಲಿಸಿದ್ದಾರೆ. ಪಕ್ಷದ ಅಧಿಕೃತ ಟಿಕೆಟ್ ಘೋಷಣೆಯಾಗದಿದ್ದರು ಕೂಡ ಸಮರ್ಥ ನಾಮಪತ್ರ ಸಲ್ಲಿಕೆ ಸಲ್ಲಿಸಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಈಗಾಗಲೇ ಸಚಿವ ಮಲ್ಲಿಕಾರ್ಜುನ್ ಅವರು ದಿಢೀರ್ ಎಂದು ದಾವಣಗೆರೆಯಿಂದ ಬೆಂಗಳೂರಿಗೆ ತೆರಳಿದ್ದಾರೆ.
ಬೆಂಗಳೂರಿಗೆ ತೆರಳಿರುವ ಅವರು ಇಂದು ಬೆಂಗಳೂರಿಗೆ ಆಗಮಿಸಲಿರುವ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರೊಂದಿಗೆ ಮಾತುಕತೆ ನಡೆಸಿ ತಮ್ಮ ಪುತ್ರನಿಗಾಗಿ ಟಿಕೆಟ್ಗಾಗಿ ಬೇಡಿಕೆಇಡಲಿದ್ದಾರೆ ಎಂದು ತಿಳಿದುಬಂದಿದೆ.
ಸಚಿವರ ಪುತ್ರನಿಂದ ನಾಮಪತ್ರ



