ಬೆಂಗಳೂರು: ಈ ತಿಂಗಳ 18ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಎಐಸಿಸಿ ಅಧ್ಯಕ್ಷ ಹಾಗೂ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಮಧ್ಯಾಹ್ನ 1.30ಕ್ಕೆ ವಿಧಾನಸೌಧದ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಖರ್ಗೆ ನಾಮಪತ್ರ ಸಲ್ಲಿಸಲಿದ್ದು, ಈ ಸಂದರ್ಭದಲ್ಲಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ಗಾಂಧಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಮುಖಂಡರು ಉಪಸ್ಥಿತಿ ಇರಲಿದ್ದಾರೆ. ನಾಲ್ಕು ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಮೂರು ಸ್ಥಾನಗಳು ಕಾಂಗ್ರೆಸ್ ಪಕ್ಷಕ್ಕೆ ಲಭ್ಯವಾಗಲಿದ್ದು, ಮನ್ಸೂರ್ ಆಲಿ ಖಾನ್ ಹಾಗೂಪವನ್ ಕೇರಾ ಅವರನ್ನು ಅಧಿಕೃತ ಅಭ್ಯರ್ಥಿಗಳನ್ನಾಗಿ ಕಾಂಗ್ರೆಸ್ ಪಕ್ಷ ಪ್ರಕಟಿಸಿದೆ. ಬಿಜೆಪಿ ಅಭ್ಯರ್ಥಿ ಯಾರೂ ಎಂಬುದು ಇದುವರೆಗೂ ಅಧಿಕೃತವಾಗಿ ಪ್ರಕಟಗೊಂಡಿಲ್ಲ. ಇಂದು ಸಂಜೆ ಅಥವಾ ನಾಳೆಯೊಳಗಾಗಿ ಪ್ರಕಟಗೊಳ್ಳಲಿದೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.
ರಾಜ್ಯ ಸಭೆಗೆ ಆಯ್ಕೆ ಬಯಸಿ ಖರ್ಗೆ ನಾಮಪತ್ರ



