ದಾಸನಪುರ: ಯಲಹಂಕ ವಿಧಾನಸಭಾ ಕ್ಷೇತ್ರ ದಾಸನಪುರ ಹೋಬಳಿ ಕದರನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ವರ್ಷಗಳ ಹಿಂದೆ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಭೂಮಿ ಪೂಜೆ ಸಲ್ಲಿಸಲಾಯಿತು ಅಂದಿನಿAದ ಇಂದಿನವರೆಗೂ ಈ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯ ದೊರೆತಿಲ್ಲ ಈ ವಿಚಾರವಾಗಿ ಹಲವು ಬಾರಿ ನಗರಸಭೆ ಅಧಿಕಾರಿಗಳ ಗಮನಕ್ಕೆ ತಂದಿದ್ದರು ಯಾವುದೇ ಪ್ರಯೋಜನವಾಗಿಲ್ಲ.
ಗುತ್ತಿಗೆದಾರರ ನಿರ್ಲಕ್ಷದಿಂದ ಕದರನಹಳ್ಳಿ ಗ್ರಾಮದ ಗ್ರಾಮಸ್ಥರು ಕುಡಿಯುವ ನೀರಿಗೆ ಪಕ್ಕದ ಗ್ರಾಮಗಳಿಗೆ ತೆರಳಬೇಕಾದ ಅನಿವಾರ್ಯತೆ ಎದುರಾಗಿದೆ. ಇನ್ನಾದರೂ ಕುಡಿಯುವ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯ ದೊರೆಯುವುದೇ ನೋಡಬೇಕಿದೆ.
ಕಾರ್ಯಾರಂಭಗೊಳ್ಳದ ಕುಡಿಯುವ ನೀರಿನ ಘಟಕ: ೩ ವರ್ಷದಿಂದ ಕಾಮಗಾರಿ



