ಇಂಪಾಲ್: ಮಣಿಪುರದಲ್ಲಿ ನಡೆದಿರುವ ಹಿಂಸಾಚಾರ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಲು ಕೇಂದ್ರ ಸರ್ಕಾರ ಮುಂದಾಗಿದೆ.
ಇಂಪಾಲ್‍ನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಕೇಂದ್ರ ಗೃಹಖಾತೆ ಸಚಿವ ಮಣಿಪುರ ಹಿಂಸಾಚಾರ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
ನಿವೃತ್ತ ನ್ಯಾಯಾಮೂರ್ತಿ ಅವರ ನೇತೃತ್ವದಲ್ಲಿ ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.ನಾಳೆಯಿಂದ ಕುಕಿ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸಲಾಗುವುದು ಎಂದು ಸುದ್ದಿಗಾರರೊಂದಿಗೆ ತಿಳಿಸಿರುವ ಅವರು ಕೇಂದ್ರ ಸರ್ಕಾರ ಮಣಿಪುರ ರಾಜ್ಯಕ್ಕೆ ಅಗತ್ಯವಾದ ನೆರವು ನೀಡಲಿದೆ ಎಂದು ಹೇಳಿದ್ದಾರೆ.
ಅನಗತ್ಯ ಸುಳ್ಳು ಸುದ್ದಿಗಳನ್ನು ಹರಡುವವರ ವಿರುದ್ಧವೂ ಕಠಿಣ ಕ್ರಮ ಜರುಗಿಸುವ ಎಚ್ಚರಿಕೆ ನೀಡಿರುವ ಶಾ ಜಾಲತಾಣಗಳಿಗೂ ಎಚ್ಚರಿಕೆ ಸಂದೇಶ ನೀಡಿದ್ದಾರೆ.
15 ಸ್ಥಳಗಳಲ್ಲಿ ಪೆಟ್ರೋಲ್ ಡಿಸೇಲ್ ಪೂರೈಕೆಗೆ ವ್ಯವಸ್ಥೆ ಮಾಡುವುದಾಗಿ ಹೇಳಿರುವ ಅವರು, ಶಾಂತಿ ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
Leave a Review