ಬೆಂಗಳೂರು : ಜೋಂಬಿ ಡ್ರಗ್ಸ್ ಸೇವಿಸುತ್ತಿದ್ದ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ನಟ ದುನಿಯಾ ವಿಜಯ್ ಮತ್ತು ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ರವರಿಗೆ ಸಂಕಷ್ಟ ಎದುರಾಗಿದೆ. ವಿಡಿಯೋ ಬಗ್ಗೆ ಸ್ಪಷ್ಟನೆ ಕೇಳಿ ಬಾಗಲೂರು ಠಾಣೆ ಪೊಲೀಸರು ನೋಟಿಸ್ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.ಈ ಒಂದು ವಿಡಿಯೋ ಕುರಿತಂತೆ ಸಮಾಜದ ಜಾಲತಾಣದಲ್ಲಿ ನಟ ವಿಜಯ್ ಮತ್ತು ಭಾಸ್ಕರ್ ರಾವ್ ವಿಡಿಯೋ ಅಪ್ಲೋಡ್ ಮಾಡಿದ್ದರು. ಪ್ರಕರಣ ಸಂಬAಧ ಬಾಗಲೂರು ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಈಗಾಗಲೇ ಈ ಒಂದು ವಿಡಿಯೋ ಹಂಚಿಕೊಂಡಿದ್ದ 15 ಜನರಿಗೆ ನೋಟಿಸ್ ನೀಡಿದ್ದಾರೆ ಮಾಹಿತಿಯ ಬಗ್ಗೆ ದಾಖಲೆ ಒದಗಿಸುವಂತೆ ಸೂಚನೆ ನೀಡಿದ್ದಾರೆ.



