ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಿಗೆ ಪ್ರಚಾರ ಬಿರುಸುಗೊಂಡಿರುವ ಬೆನ್ನಲ್ಲೇ ಉಳಿದ 14 ಕ್ಷೇತ್ರಗಳಿಗೆ ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ. ಬಹುತೇಕ ರಾಜ್ಯದ ಮಧ್ಯಕರ್ನಾಟಕ, ಕಲ್ಯಾಣ ಕರ್ನಾಟಕ ಹಾಗೂ ಕಿತ್ತೂರು ಕರ್ನಾಟಕ ಸೇರಿದಂತೆ 14 ಲೋಕಸಭಾ ಕ್ಷೇತ್ರಗಳಿಗೆ ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದ್ದು, ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ.
ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಇದೇ ತಿಂಗಳ 19 ಕಡೆಯ ದಿನವಾಗಿದ್ದು, 20 ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, 22 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಮೇ 7 ರಂದು ಮತದಾನ ನಡೆಯಲಿದೆ. ಇದೇ ವೇಳೆ ಯಾದಗಿರಿ ಜಿಲ್ಲೆ ಸುರಪುರ ವಿಧಾನಸಭಾ ಕ್ಷೇತ್ರಕ್ಕೂ ಉಪಚುನಾವಣೆ ನಡೆಯಲಿದ್ದು, ಆಯೋಗ ಅಧಿಸೂಚನೆಯನ್ನು ಹೊರಡಿಸಲಿದೆ.