ದೇವನಹಳ್ಳಿ: ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ರ ಸಂಬಂಧ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣಾ ವೆಚ್ಚ ವೀಕ್ಷಕರಾದ ದೆಬಾಶಿಷ್ ಮಜುಮ್ ದಾರ್ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನಕ್ಕೆ ಭೇಟಿ ನೀಡಿ ಲೋಕಸಭಾ ಚುನಾವಣೆಗೆ ಕೈಗೊಂಡಿರುವ ಸಿದ್ದತೆಗಳ ಬಗ್ಗೆ ಜಿಲ್ಲಾ ಚುನಾವಣಾಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ನಂತರ ಮಾಧ್ಯಮ ಮೇಲ್ವಿಚಾರಣಾ ಕೊಠಡಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಚುನಾವಣೆ ಸಿದ್ಧತೆಗಳ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಚುನಾವಣಾಧಿಕಾರಿ ಡಾ.ಎನ್.ಶಿವಶಂಕರ, ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕೆ.ಎನ್ ಅನುರಾಧ, ಎಂ.ಸಿ.ಎಂ.ಸಿ ನೋಡಲ್ ಅಧಿಕಾರಿ ಎಸ್.ಶಂಕರಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.