ಯಲಹಂಕ: ಅಯೋಧ್ಯೆಯ ಶ್ರೀರಾಮ ಮಂದಿರ ಉದ್ಘಾಟನಾ ಅಂಗವಾಗಿ ಅಯೋಧ್ಯೆಯಲ್ಲಿ ಪೆÇಜಿಸಲ್ಪಟ್ಟ ಮಂತ್ರಾಕ್ಷತೆಯನ್ನು ಮನೆಮನೆಗೆ ತಲುಪಿಸುವ ಕಾರ್ಯವನ್ನು ಹಾರೋಕ್ಯತನಹಳ್ಳಿ ಡಾ. ಕೃಷ್ಣಮೂರ್ತಿ ಸಾರಥ್ಯದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿಸಲಾಯಿತು.
ಬೆಂಗಳೂರು ಉತ್ತರ ತಾಲೂಕು ಹಾರೋಕ್ಯತನಹಳ್ಳಿ ಗ್ರಾಮದ ಯುವ ಮುಖಂಡರಾದ ನಾಗೇಶ್, ಗೋವಿಂದರಾಜು, ರಾಜೇಶ್ ಅವರನ್ನೊಳಗೊಂಡ ತಂಡ ಗ್ರಾಮದ ಪ್ರಮುಖ ದೇವಾಲಯಗಳಲ್ಲಿ ಪೂಜೆ ನೆರವೇರಿಸಿ ಯಲಹಂಕ ಕ್ಷೇತ್ರದ ಜನಪ್ರಿಯ ಶಾಸಕರಾದ ಎಸ್ ಆರ್ ವಿಶ್ವನಾಥ್ ಆದೇಶದಂತೆ ಪವಿತ್ರ ಮಂತ್ರಾಕ್ಷತೆಯನ್ನು ಮನೆ ಮನೆಗೆ ತಲುಪಿಸಿ.
ಉದ್ಘಾಟನೆಯ ದಿನ ತಮ್ಮ ಮನೆಗಳಲ್ಲಿ ದೀಪ ಬೆಳಗಿಸಿ ಪ್ರಭು ಶ್ರೀ ರಾಮನನ್ನು ಆರಾಧಿಸುವ ಮೂಲಕ ಶ್ರೀ ರಾಮರ ಕೃಪೆಗೆ ಪಾತ್ರರಾಗುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಗ್ರಾಮದ ಹಿರಿಯ ಮುಖಂಡರಾದ ಸಿದ್ದಲಿಂಗಪ್ಪ, ಗ್ರಾಮ ಪಂಚಾಯಿತಿ ಸದಸ್ಯರಾದ ಪುಟ್ಟಮ್ಮ ಗೋವಿಂದರಾಜು, (ಎಸ್ ಎಲ್ ವಿ )ರಂಗಸ್ವಾಮಿ, ಪುಟ್ಟಸಿದ್ದಯ್ಯ, ತಿಮ್ಮರಾಜು ಸೇರಿದಂತೆ ಹಲವು ಪ್ರಮುಖರು ಭಾಗವಹಿಸಿದ್ದರು.