ಬೆಂಗಳೂರು: ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ಮಾರಪ್ಪನಪಾಳ್ಯ ವಾರ್ಡ್ ನಲ್ಲಿರುವ ಕರ್ನಾಟಕ ಪಬ್ಲಿಕ್ ಸ್ಕೂಲ್ ಗೆ ಇಂದು ಶಿಕ್ಷಣ ಇಲಾಖೆಯ ಆಯುಕ್ತೆ ಶ್ರೀ ಮತಿ ಕಾವೇರಿ ಬಿ. ಬಿ.ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ಸಂದರ್ಭದಲ್ಲಿ ಸ್ಥಳೀಯ ಶಾಸಕರಾದ ಕೆ ಗೋಪಾಲಯ್ಯ ರವರು ಆಯುಕ್ತರಿಗೆ ಕ್ಷೇತ್ರದಲ್ಲಿ ಕೈಗೊಂಡಿರುವ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು.
ಮತ್ತು ತಮ್ಮ ಶಾಸಕರ ಅನುದಾನ ಅಡಿಯಲ್ಲಿ ಹಲವು ಶಾಲೆಗಳನ್ನು ಉನ್ನತ ದರ್ಜೆಗೆ ಏರಿಸಿ ಖಾಸಗಿ ಶಿಕ್ಷಣ ಸಂಸ್ಥೆಗಳ ರೀತಿ ಹೈಟೆಕ್ ಶಿಕ್ಷಣ ಸಂಸ್ಥೆಗಳಲ್ಲಿ ನೀಡುವ ಶಿಕ್ಷಣದ ಮಾದರಿಯಲ್ಲಿ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸಿರುವುದಾಗಿ ಗುಣಮಟ್ಟದ ಶಿಕ್ಷಣ ನೀಡುತ್ತಿರುವುದಾಗಿ ಈ ಸಂದರ್ಭದಲ್ಲಿ ತಿಳಿಸಿದ ಅವರು ಸರ್ಕಾರಕ್ಕೆ ಇಲ್ಲಿಯ ಶಾಲೆಗಳಿಗೆ ಸೂಕ್ತ ಶಿಕ್ಷಕರಿಲ್ಲದ ಕಾರಣ ನಮ್ಮ ಮಹಾಲಕ್ಷ್ಮಿ ಎಜುಕೇಶನಲ್ ಟ್ರಸ್ಟ್ ವತಿಯಿಂದ ಸುಮಾರು 45 ಶಿಕ್ಷಕ ಶಿಕ್ಷಕಿಯರನ್ನು ನೇಮಿಸಿಕೊಂಡು ಪಾಠ ಮಾಡಿಸಲಾಗುತ್ತಿದೆ.
ಆದ್ದರಿಂದ ಕೂಡಲೇ ತಾವು ಇಲ್ಲಿಯ ಪರಸ್ಥಿತಿಯನ್ನು ಅವಲೋಕಿಸಿ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಿ ಇಲ್ಲಿ. ಬೇಕಾದ ಶಿಕ್ಷಕರು ಮತ್ತು ಸ್ವಚ್ಛತಾ ಸಿಬ್ಬಂದಿಗಳನ್ನು ನೇಮಿಸುವಂತೆ ಸರ್ಕಾರಕ್ಕೆ ವರದಿ ನೀಡಬೇಕು. ಈಗ ಸಧ್ಯ ಇಲ್ಲಿ ಎಲ್ ಕೆ ಜಿ ಯಿಂದ 10 ನೇ ತರಗತಿ ವರೆಗೆ ಸುಮಾರು 2800 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ.
ಇದರ ಜೊತೆಗೆ ಹಲವು ಶಾಲೆಗಳನ್ನು 7 ತರಗತಿಯಿಂದ 10 ನೇ ತರಗತಿಗೆ ಮೇಲ್ದರ್ಜೆಗೆ ಏರಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಹಾಗೂ ಮೂಲಭೂತ ಸೌಕರ್ಯಗಳನ್ನು ಕ್ಷೇತ್ರದ ಎಲ್ಲ ಶಾಲೆಗಳಿಗೆ ಒದಗಿಸಿ ಕೊಡುವಂತೆ ಶಾಸಕರು ಮನವಿ ಮಾಡಿದರು.
ಇದಕ್ಕೆ ಆಯುಕ್ತರ ಕಾವೇರಿ. ಅವರು ಮಾತನಾಡಿ ಸರ್ಕಾರದಿಂದ ಯಾವೆಲ್ಲ ಸೌಲಭ್ಯಗಳು ಲಭ್ಯ ಇದೆಯೋ ಅವೆಲ್ಲವನ್ನು ಸರ್ಕಾರದ ಹಾಗೂ ಶಿಕ್ಷಣ ಸಚಿವರ ಗಮನಕ್ಕೆ ತಂದು ಪೂರೈಸಲಾಗುವುದು ಎಂದು ಭರವಸೆ ನೀಡಿದರು.
ಜೊತೆಗೆ ಕ್ಷೇತ್ರದ ಶಾಲೆಗಳ ಅಭಿವೃದ್ಧಿ ಕಂಡು ಶಾಸಕರ ಕೆಲಸದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಆಂಜನಪ್ಪ, ಸ್ಥಳೀಯ ಮುಖಂಡರುಗಳಾದ ಮಾಜಿ ಬಿಬಿಎಂಪಿ ಸದಸ್ಯರಾದ ಎಂ ಮಹದೇವ, ವಾರ್ಡ್ ಅಧ್ಯಕ್ಷ ಡಾ, ನಾಗೇಂದ್ರ ಪುಟ್ಟರಾಜು,ಸೇರಿದಂತೆ ಹಲವು ಮುಖಂಡರು ಶಾಲಾ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.