ಬೆಂಗಳೂರು: ತುರ್ತು ಪರಿಸ್ಥಿತಿಯಲ್ಲಿದ್ದ ಮಹಿಳೆಗೆ ವೈದ್ಯರು ಚಿಕಿತ್ಸೆ ನೀಡದೆ ನಿರ್ಲಕ್ಷ ತೋರಿದ್ದರಿಂದ ಮಹಿಳೆ ಸಾವನ್ನಪ್ಪಿರುವ ಘಟನೆ ಜಯದೇವ ಆಸ್ಪತ್ರೆಯಲ್ಲಿ ನಡೆದಿದೆ. ಅಪರೇಷನ್ ಯೂನಿಟ್ ಬಳಸುವ ವಿಚಾರಕ್ಕೆ ವೈದ್ಯರ ನಡುವೆ ಕಿತ್ತಾಟ ನಡೆದಿದೆ. ಆಪರೇಷನ್ ಸಿಗದೆ ಮಹಿಳೆ ಸಾವನ್ನಪ್ಪಿದ್ದಾರೆ ಎನ್ನುವ ಆರೋಪ ಮಹಿಳೆಯ ಕುಟುಂಬಸ್ಥರು ಆರೋಪಿಸಿದ್ದಾರೆ. ಜಯದೇವ ಆಸ್ಪತ್ರೆಯಲ್ಲಿ ಮಾಯಮ್ಮ(65) ಎಂಬ ವೃದ್ಧೆ ಮೃತಪಟ್ಟಿದ್ದಾರೆ.
ತಾಯಿಗೆ ಸರಿಯಾಗಿ ಚಿಕಿತ್ಸೆ ನೀಡದಿದ್ದರಿಂದ ಮೃತಪಟ್ಟಿದ್ದಾರೆ ಎಂದು ಮಾಯಮ್ಮ ಪುತ್ರ ಮತ್ತು ಸೊಸೆ ಜಯದೇವ ಆಸ್ಪತ್ರೆ ವೈದ್ಯರ ವಿರುದ್ಧ ಆರೋಪಿಸಿದ್ದಾರೆ.
ವೈದ್ಯರ ನಿರ್ಲಕ್ಷಕ್ಕೆ ವೃದ್ಧೆ ಬಲಿ



