ಮಧುಗಿರಿ: ಶಾಸಕರಾದ ಕೆ.ಎನ್ ರಾಜಣ್ಣನವರ ಹುಟ್ಟುಹಬ್ಬದ ಪ್ರಯುಕ್ತ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಬೆಂಗಳೂರು, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ತುಮಕೂರು, ಇತರೆ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಏಪ್ರಿಲ್ 15 ರಂದು ಪಟ್ಟಣದ ರಾಜೀವ್ ಗಾಂಧಿ ಕ್ರೀಡಾಂಗಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೃಹತ್ ಉದ್ಯೋಗಮೇಳ ಆಯೋಜಿಸಲಾಗಿದೆ ಎಂದು ವಿಧಾನಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ತಿಳಿಸಿದರು.
ಪಟ್ಟದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮಧುಗಿರಿ ತಾಲ್ಲೂಕು ಬರಪೀಡಿತ ಪ್ರದೇಶವಾಗಿದ್ದು ಈ ಭಾಗದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಿರುವುದರಿಂದ ಬಹಳಷ್ಟು ಯುವಕ ಯುವತಿಯರು ಉದ್ಯೋಗ ಅರಸಿ ಬೇರೆ ಬೇರೆ ಜಿಲ್ಲೆಗಳಿಗೆ ಹೋಗುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ವಿದ್ಯಾಭ್ಯಾಸ ಮಾಡಿದ ಯುವಕ ಯುವತಿಯರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ನಮ್ಮ ತಾಲ್ಲೂಕಿನಲ್ಲಿ ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ
ಮೇಳ ಆಯೋಜಿಸಿದ್ದು ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಉದ್ಯೋಗಮೇಳದಲ್ಲಿ ಭಾಗವಹಿಸುವಂತೆ ವಿಧಾನ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ಮನವಿ ಮಾಡಿದರು.ಈ ಮೇಳದಲ್ಲಿ ರಾಜ್ಯ ಮತ್ತು ಜಿಲ್ಲೆಯಲ್ಲಿನ ಸುಮಾರು 75ಕ್ಕಿಂತಲೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿದ್ದು ಕಾರ್ಯಕ್ರಮದ ಯಶಸ್ವಿಗೆ ಈಗಾಗಲೇ ಸಾಕಷ್ಟು ತಯಾರಿ ನಡೆದಿದ್ದು ಬರುವ ಉದ್ಯೋಗಾಂಕ್ಷಿಗಳಿಗೆ ಯಾವುದೇ ರೀತಿಯ ತೊಂದರೆಯಾಗದ ರೀತಿ ಎಚ್ಚರವಹಿಸಲಾಗಿದೆ ಎಂದರು.
ಆನ್ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಲು ಈಗಾಗಲೇ ಅವಕಾಶ ಕಲ್ಪಿಸಲಾಗಿದ್ದು ಈ ವರೆಗೂ 1,800ಕ್ಕಿಂತಲೂ ಹೆಚ್ಚು ಅಭ್ಯರ್ಥಿಗಳು ನೋಂದಾಯಿಸಿಕೊAಡಿದ್ದು ಬರುವಂತಹ ಅಭ್ಯರ್ಥಿಗಳಿಗೆ ಕಂಪನಿಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸ್ಥಳದಲ್ಲಿಯೇ ನೇಮಕಾತಿ ಆದೇಶ ಪತ್ರ ನೀಡಲಾಗುವುದು ಎಂದರು. ಈ ಉದ್ಯೋಗಮೇಳದಿಂದ ನಮ್ಮ ವಿದ್ಯಾರ್ಥಿ
ಗಳಿಗೆ ಮತ್ತು ಉದ್ಯೋಗಾಂಕ್ಷಿಗಳಿಗೆ ಹೆಚ್ಚಿನ ಅನುಕೂಲವಾಗಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಉದ್ಯೋಗಮೇಳ ಯಶಸ್ವಿಗೊಳಿಸುವಂತೆ ಮಾದ್ಯಮಗಳ ಮೂಲಕ ರಾಜೇಂದ್ರ ರಾಜಣ್ಣ ಮನವಿ ಮಾಡಿದರು. ಭಾಗದಲ್ಲಿನ ಉದ್ಯೋಗಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಉಚಿತ ಆರೋಗ್ಯ ತಪಾಸಣೆ, ಸೇರಿದಂತೆ ಎಲ್ಲರಿಗೂ ಉಪಹಾರ ವ್ಯವಸ್ಥೆ ಕಲ್ಪಿಸಲಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ತಿಳಿಸಿದರು.ಏ.15 ರ ಬೆಳ್ಳಗೆ 9.30 ಗಂಟೆಗೆ ಶಾಸಕರಾದ ಆಯೋಜಕರು ಸ್ಥಳೀಯ ಅಧಿಕಾರಿಗಳು, ಕಾಲೇಜಿನ ಪ್ರಾಂಶುಪಾಲರು ಕಾರ್ಯಕ್ರಮದ ಯಶಸ್ವಿಗೆ ಕೈ ಕಾರ್ಯಕ್ರಮವನ್ನು ಕೆ.ಎನ್ ರಾಜಣ್ಣನವರು ಉದ್ಘಾಟಿಸಲಿದ್ದು ಜೋಡಿಸುವಂತೆ ಈ ಸಂಧರ್ಭದಲ್ಲಿ ಸೂಚಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ, ತಹಶೀಲ್ದಾರ್ ಶ್ರೀನಿವಾಸ್, ಡಿವೈಎಸ್ ಪಿ ಮಂಜುನಾಥ್, ಪುರಸಭೆ ಮುಖ್ಯಾಧಿಕಾರಿ ಸುರೇಶ್, ಮಾಜಿ ಪುರಸಭೆ ಅಧ್ಯಕ್ಷರಾದ ನಂಜುಂಡರಾಜು, ಜಿಲ್ಲಾ ಕೇಂದ್ರ ಬ್ಯಾಂಕ್ ಉಪಾಧ್ಯಕ್ಷರಾದ ಜಿ.ಜೆ ರಾಜಣ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಗೋಪಾಲಯ್ಯ, ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.
ಶಾಸಕ ಕೆ.ಎನ್ ರಾಜಣ್ಣನವರ ಹುಟ್ಟುಹಬ್ಬದ ಪ್ರಯುಕ್ತ ಏ. 15 ರಂದು ಬೃಹತ್ ಉದ್ಯೋಗಮೇಳ



