ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಂಡೇಬಲ್ ಜಿಲ್ಲೆಯಲ್ಲಿ ಆಪರೇಷನ್ ಅರಹಮಾ ಕಾರ್ಯಾಚರಣೆ ನಡೆಯುತ್ತಿದ್ದು, ಉಗ್ರರ ವಿರುದ್ಧ ಭಾರತೀಯ ಸೈನಿಕರು ಸಮರ ಸಾರಿದ್ದಾರೆ. ರಾತ್ರಿಯಿಡೀ ನಡೆದ ಎನ್ಕೌಂಟರ್ ಕಾರ್ಯಾಚರಣೆಯಲ್ಲಿ ಓರ್ವ ಪಾಕಿಸ್ತಾನಿ ಮೂಲದ ಉಗ್ರ ಸಾವನ್ನಪ್ಪಿದ್ದಾನೆ ಎಂದು ಭಾರತೀಯ ಸೇನೆ ತಿಳಿಸಿದೆ.
ಗಂಡೇಬಲ್ ಜಿಲ್ಲೆಯ ಅರಹಮಾ ಪ್ರದೇಶದಲ್ಲಿ ಆಪರೇಷನ್ ಅರಹಮಾ ಕಾರ್ಯಾಚರಣೆ ಮುಂದುವರಿದಿದ್ದು. ಭದ್ರತಾ ಪಡೆಗಳು ಶೋಧ ನಡೆಸುತ್ತಿವೆ. ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ ಜೊತೆಗೆ ಭಾರತೀಯ ಸೇನೆಯ



