ಮಳವಳ್ಳಿ: ಮಳವಳ್ಳಿ ತಾಲೂಕಿನ ನಂಜೇಗೌಡನ ದೊಡ್ಡಿಯಲ್ಲಿರುವ ಮೈಸೂರಿನ ಸ್ಲಂ ಬೋರ್ಡ್ ಇಂಜಿನಿಯರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಬಾಲರಾಜುರವರ ಫಾರಂ ಹೌಸ್ ಮೇಲೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲಿಸಿ ಕೆಲ ಮಾಹಿತಿ ಕಲೆ ಹಾಕಿದ್ದಾರೆ. ಮೈಸೂರಿನ ಲೋಕಾಯುಕ್ತ ಸುಚಿತ್ ರವರ ನೇತೃತ್ವದ ತಂಡ ಇಂದು ದಾಳಿಯಲ್ಲಿ ಪಾಲ್ಗೊಂಡಿದ್ದರು.