ಬೆಂಗಳೂರು: ಇಂದಿನಿಂದ ಕರ್ನಾಟಕ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇಂದಿನಿಂದ ಜೂನ್ 12ನೇ ತಾರೀಕಿನ ತನಕ ರಾಜ್ಯದಲ್ಲಿ ಭಾರೀ ಮಳೆಯಾಗಲಿದ್ದು, ಹೀಗಾಗಿ ಆರೆಂಜ್ ಅಲರ್ಟ್ ಘೋಷಣೆ ಮಾಡಿ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ದೇಶದ ವಾಯುವ್ಯ ಭಾಗದ ಹರಿಯಾಣ, ಪಂಜಾಬ್ ಮತ್ತು ಉತ್ತರ ಪ್ರದೇಶ ಭಾಗದಲ್ಲಿ ಮೇ 13 ರವರೆಗೆ ಮತ್ತು ರಾಜಸ್ಥಾನದಲ್ಲಿ ಮೇ 12 ರವರೆಗೆ ಬಿರುಗಾಳಿಯೊಂದಿಗೆ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಗುಜರಾತಿನ ಕರಾವಳಿ ಪ್ರದೇಶಗಳಲ್ಲಿ ಮೇ 14 ರವರೆಗೆ ಬಿಸಿ ಮತ್ತು ಆದ್ರ್ರ ವಾತಾವರಣವು ಮುಂದುವರಿಯಲಿದೆ.
ಜೂನ್ 12ರ ವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆಯಾದರೂ ಎಲ್ಲಾ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಿಲ್ಲ. ರಾಜ್ಯದ ಕೆಲವು ಜಿಲ್ಲೆಗಳಿಗೆ ಮಾತ್ರ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ರಾಜ್ಯ ಹವಾಮಾನ ಇಲಾಖೆ ಇಂದು ರಾಜ್ಯದ 12 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಿದೆ.ರಾಜ್ಯಾದ್ಯಂತ ದಿನದಿಂದ ದಿನಕ್ಕೆ ಮುಂಗಾರು ಮಳೆ ಚುರುಕು ಪಡೆಯುತ್ತಿರುವ ಹಿನ್ನೆಲೆಯಲ್ಲಿ, ಒಟ್ಟು 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿ ಎಚ್ಚರಿಕೆ ವಹಿಸಲು ಹವಾಮಾನ ಇಲಾಖೆ ಸೂಚನೆ ನೀಡಿದ್ದು, ಕರಾವಳಿ ತೀರದಲ್ಲಿರುವ ಮೀನುಗಾರರಿಕೆ ಸಮುದ್ರಕ್ಕೆ ಇಳಿಯುವಾಗ ಎಚ್ಚರಿಕೆ ವಹಿಸುವಂತೆಯೂ ಸೂಚನೆ ನೀಡಲಾಗಿದೆ.