ಬೆಂಗಳೂರು : ಮುಂದಿನ ಎರಡು ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದ 14ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಹವಾಮಾನ ಇಲಾಖೆಯು ವಿವಿಧ ಜಿಲ್ಲೆಗಳಿಗೆ `ಆರೆಂಜ್’ ಹಾಗೂ `ಯೆಲ್ಲೋ’ ಅಲರ್ಟ್ ಘೋಷಿಸಿದೆ.
ಬಾಗಲಕೋಟೆ, ಬೆಳಗಾವಿ, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಮುಂದಿನ ಎರಡು ದಿನಗಳ ಕಾಲ ಮಳೆ ಸಾಧ್ಯತೆ ಆರೆಂಜ್, ಯೆಲ್ಲೋ ಅಲರ್ಟ್



