ಬೆಂಗಳೂರು: ತಮಿಳುನಾಡಿಗೆ ನೀರು ಹರಿಸುವ ಸಂಬAಧ ಇಂದು ನಡೆಯುತ್ತಿರುವ ಸಿಡಬ್ಲ್ಯೂಎಂಎ ಸಭೆಯಲ್ಲಿ ರಾಜ್ಯದ ಪರ ನಿರ್ಧಾರ ವ್ಯತಿರಿಕ್ತವಾಗಿ ಬಂದರೆ ಉಗ್ರ ಹೋರಾಟ ಹಮ್ಮಿಕೊಳ್ಳುವುದಾಗಿ ವಿವಿಧ ಸಂಘಟನೆಗಳು ಎಚ್ಚರಿಸಿವೆ. ಈಗಾಗಲೇ ನೀರು ಹರಿಸುವ ಸಂಬAಧ ಕಾವೇರಿ ನೀರು ನಿಯಂತ್ರಣ ಸಮಿತಿ ಪ್ರತಿನಿತ್ಯ 3500 ಕ್ಯೂಸೆಕ್ಸ್ ನೀರು ಹರಿಸುವಂತೆ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಇಂದು ತುರ್ತಾಗಿ ಕಾವೇರಿ ನೀರು ನಿರ್ವಹಣ ಸಮಿತಿ ತುರ್ತು ಸಭೆ ಕರೆದಿದೆ. ಇಂದು ಮಧ್ಯಾಹ್ನ 2.30ಕ್ಕೆ ದೆಹಲಿಯಲ್ಲಿ ನೀರು ನಿರ್ವಹಣ ಸಮಿತಿಯ ಸಭೆ ನಡೆಯುತ್ತಿದ್ದು, ಈ ಸಭೆಯಲ್ಲಿ ಏನು ನಿರ್ಧಾರ ಹೊರ ಬೀಳುತ್ತದೆ ಎಂದು ಕಾಯುತ್ತಿದ್ದಾರೆ. ನೀರು ನಿಯಂತ್ರಣ ಸಮಿತಿ ನೀಡಿರುವ ತೀರ್ಪಿಗೆ ತಡೆ ಬಂದರೆ ಹೋರಾಟದ ಕಾವು ಕಡಿಮೆಯಾಗುತ್ತದೆ. ವ್ಯತಿರಿಕ್ತವಾಗಿ ಬಂದರೆ ಹೋರಾಟದ ಸ್ವರೂಪ ತೀವ್ರಗೊಳ್ಳುತ್ತದೆ ಎಂಬ ಸಂದೇಶ ರವಾನೆಯಾಗಿದೆ. ನಾಳೆ ಕನ್ನಡ ಚಳವಳಿ ಹೋರಾಟಗಾರ ವಾಟಾಳ್ನಾಗರಾಜ್ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ಕಾವೇರಿ ನೀರು ಹರಿಸುವ ತೀರ್ಪನ್ನು ವಿರೋಧಿಸಿ ಕರ್ನಾಟಕ ಬಂದ್ಗೆ ಕರೆ ನೀಡುವ ಬಗ್ಗೆ ಸಮಾಲೋಚನೆ ನಡೆಯಲಿದೆ. ಇದೇ ಸಭೆಯಲ್ಲಿ ಬಂದ್ ದಿನವನ್ನು ನಿರ್ಧರಿಸಲಾಗುವುದು. ಈಗಾಗಲೇ ಮಂಡ್ಯ ಶ್ರೀರಂಗಪಟ್ಟಣದಲ್ಲಿ ತಮ್ಮ ಮುಂದಿನ ಹೋರಾಟಗಳ ಬಗ್ಗೆ ನಿರ್ಧರಿಸಲು ರೈತ ಸಂಘಟನೆಗಳು ಪ್ರತ್ಯೇಕ ಸಭೆ ನಡೆಸಿವೆ. ಮಧ್ಯಾಹ್ನ ಸಿಡಬ್ಲ್ಯೂಎಂಎ ಸಭೆ ನಂತರ ಹೋರಾಟದ ರೂಪುರೇಷೆಗಳನ್ನು ನಿರ್ಧಾರ ಮಾಡಲಾಗುವುದು. ಈಗಾಗಲೇ ರಾಜ್ಯ ಬಿಜೆಪಿ ಘಟಕದ ವತಿಯಿಂದ ನಾಳೆ ಮಂಡ್ಯದಲ್ಲಿ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ.



