ನಿರ್ದೇಶಕ ಸಿಂಪಲ್ ಸುನಿ ಮಾತನಾಡಿ, ಇದು ಸ್ಪೆಷಲ್ ಸಿನಿಮಾ. ನಾನು ಟ್ರೇಲರ್ ಚೆನ್ನಾಗಿ ಕಟ್ ಮಾಡುತ್ತೇನೆ ಎಂದು ಎಲ್ಲರೂ ಹೇಳುತ್ತಾರೆ. ಆದ್ರೆ ಈ ಚಿತ್ರದ ಚಾಲೆಂಜ್ ಏನೂ ಎಂದರೆ ಟ್ರೇಲರ್ ಕಟ್ ಚೆನ್ನಾಗಿ ಮಾಡಲು ಆಗುವುದಿಲ್ಲ ಎನ್ನುವುದು ಗೊತ್ತು. ಚಿತ್ರದ ಅರ್ಧ ಪಾರ್ಟ್ ನಾನು ಥಿಯೇಟರ್ ನಲ್ಲೇ ರಿವೀಲ್ ಮಾಡುವುದು. ಸಿನಿಮಾದಲ್ಲಿ ಏನೋ ಒಂದು ಅಂಶವಿದೆ. ಅದನ್ನು ಥಿಯೇಟರ್ ನಲ್ಲಿಯೇ ನೋಡಬೇಕು. ಹೀಗಾಗಿ ಅರ್ಧ ಸಿನಿಮಾದಲ್ಲಿ ಟ್ರೇಲರ್ ಕಟ್ ಮಾಡಬೇಕು. ನಾಯಕ ಶೀಲಮ್ ಚೆನ್ನಾಗಿ ನಟಿಸಿದ್ದಾರೆ. ಒಂದು ಸರಳ ಪ್ರೇಮ ಕಥೆ ಆದ್ಮೇಲೆ ನಿರ್ಮಾಪಕ ರಮೇಶ್ ನಮ್ಮ ಟೀಂ ಜೊತೆ ಕೈ ಜೋಡಿಸಿರುವುದಕ್ಕೆ ಪಾಸಿಟಿವ್ ವೈಬ್ಸ್ ಇದೆ. ಎಂದರು. ನಾಯಕ ಶೀಲಮ್ ಮಾತನಾಡಿ, ಚಿತ್ರರಂಗಕ್ಕೆ ಹೀರೋ ಆಗಿ ಪಾದಾರ್ಪಣೆ ಮಾಡುತ್ತಿದ್ದೇನೆ. ಟೀಸರ್ ಎಲ್ಲರಿಗೂ ಇಷ್ಟವಾಗಿದೆ ಎಂದುಕೊಳ್ಳುತ್ತೇನೆ. ಹೀರೋ ಎಂದರೆ ಪವಾಡ. ಯಾಕೆಂದರೆ ಎಲ್ಲರೂ ಹೀರೋ ಆಗಲು ಆಗುವುದಿಲ್ಲ. ಎಷ್ಟೇ ದುಡ್ಡಿದ್ದರು, ಎಷ್ಟೇ ಆಕ್ಟಿಂಗ್ ಸ್ಕಿಲ್ ಇದ್ದರೂ ಆಗಲು ಆಗುವುದಿಲ್ಲ. ಡ್ಯಾನ್ಸ್, ಫೈಟ್ ಬರುತ್ತೆ. ನೋಡಲು ಚೆನ್ನಾಗಿದ್ದರೂ ಆಗಲ್ಲ. ಆದರೆ ಎಲ್ಲವನ್ನೂ ದಾಟಿ ಪವಾಡ ಆಗಬೇಕು. ನನ್ನ ಜೀವನದಲ್ಲಿ ಅದು ಆಗಿದೆ. ಇದಕ್ಕೆ ಕಾರಣ ಸುನಿ.ನನ್ನ ಸಿನಿ ಜರ್ನಿಯಲ್ಲಿ ಏನೇ ಸಾಧಿಸಿದ್ದರು ನಾನು ಆ ಕ್ರೆಡಿಟ್ ಅವರಿಗೆ ಕೊಡುತ್ತೇನೆ. ನಿರ್ಮಾಪಕ ರಮೇಶ್ ಈ ಚಿತ್ರಕ್ಕೆ ಸಾಥ್ ಕೊಟ್ಟಿದ್ದಾರೆ. ಚಿತ್ರರಂಗದಲ್ಲಿ ಸ್ಟಾರ್ಸ್ ಸಿನಿಮಾ ಗೆಲ್ಲಬೇಕು. ಈ ಟೀಮ್ ಸೂಪರ್ ಸ್ಟಾರ್ಸ್ ಗೆ ಸಿನಿಮಾ ಮಾಡುವ ತಂಡ. ಆದರೆ ನನ್ನನ್ನು ಹಾಕಿಕೊಂಡು ಚಿತ್ರ ಮಾಡಿದ್ದಾರೆ. ಅದು ನನ್ನ ಪುಣ್ಯ. ನನ್ನ ಇಡೀ ತಂಡಕ್ಕೆ ಧನ್ಯವಾದ ಅಂದರು. ಚಿತ್ರದಲ್ಲಿ ಶೀಲಮ್ ಗೆ ಜೋಡಿಯಾಗಿ ಸಾತ್ವಿಕಾ ಹಾಗೂ ಮೋಕ್ಷಾ ಕುಶಾಲ್ ನಟಿಸಿದ್ದಾರೆ. ಮೈಸೂರು ರಮೇಶ್, ಶ್ರೀರಂಗರಾಜು, ಲೋಕೇಶ್ ಬೆಳವಾಡಿ ಹಾಗೂ ಗೋವಾ ರಮೇಶ್ ನಿರ್ಮಾಣ ಮಾಡಿದ್ದಾರೆ.



