ಮಂಗಳೂರು: ಭಾರತದ `ಬ್ರಿಡ್ಜ್ ಮ್ಯಾನ್’ ಎಂದೇ ಖ್ಯಾತರಾಗಿದ್ದ, ನೂರಾರು ಗ್ರಾಮೀಣ ಮತ್ತು ದುರ್ಗಮ ಪ್ರದೇಶಗಳಿಗೆ ಸಂಪರ್ಕದ ಕೊಂಡಿಯಾಗಿದ್ದ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ (76) ಅವರು ಇಂದು ಮುಂಜಾನೆ ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಪತ್ನಿ ಉಷಾ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ.



