ಕಾಬೂಲ್: ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದ ಮಧ್ಯೆ ಈಗ ಯುದ್ಧದ ಭೀತಿ ಆರಂಭವಾಗಿದೆ. ಕಾಬೂಲ್ ಮೇಲೆ ವಾಯುದಾಳಿ ನಡೆಸಿದ್ದಕ್ಕೆ ಪ್ರತಿಯಾಗಿ ತಾಲಿಬಾನ್ ಈಗ ಪಾಕಿಸ್ತಾನದ ಮೇಲೆ ದಾಳಿ ನಡೆಸಿದೆ. ಇದಕ್ಕೆ ಪ್ರತಿಯಾಗಿ ಪಾಕಿಸ್ತಾನ ಕ್ಷಿಪಣಿ ದಾಳಿ ನಡೆಸಿದೆ. ಅಫ್ಘಾನ್- ಪಾಕ್ ಗಡಿಯಾಗಿರುವ ಡುರಾಂಡ್ ಲೈನ್ನಲ್ಲಿ ನಡೆದ ಘರ್ಷಣೆಯಲ್ಲಿ ೧೨ ಪಾಕಿಸ್ತಾನಿ ಸೈನಿಕರು ಸಾವನ್ನಪ್ಪಿದ್ದಾರೆ. ಅಷ್ಟೇ ಅಲ್ಲದೇ ಪಾಕಿಸ್ತಾನ ಸೇನೆಯ ಗಡಿಯಲ್ಲಿ ಸ್ಥಾಪಿಸಿದ್ದ ೧೨ ಔಟ್ಪೋಸ್ಟಿಂಗ್
ವಶಪಡಿಸಿಕೊAಡಿದೆ ಎಂದು ವರದಿಯಾಗಿದೆ.
ಕುನಾರ್ ಮತ್ತು ಹೆಲ್ಮಂಡ್ ಪ್ರಾಂತ್ಯಗಳಲ್ಲಿ ಡುರಾAಡ್ ರೇಖೆಯಾದ್ಯಂತ ಪಾಕಿಸ್ತಾನಿ ಸೇನೆ ಹಲವಾರು ಹೊರಠಾಣೆಗಳನ್ನು ತಾಲಿಬಾನ್ ಪಡೆಗಳು ವಶಪಡಿಸಿಕೊಂಡಿವೆ ಎAದು ಅಫ್ಘಾನ್ ರಕ್ಷಣಾ ಅಧಿಕಾರಿಯೊಬ್ಬರು ಹೇಳಿಕೆಯಲ್ಲಿ ತಿಳಿಸಿದ್ದಾರೆ.