ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ | ಪೊಲೀಸ್ ಅಧಿಕಾರಿಗಳ ವಿರುದ್ಧ ಅಸಮಾಧಾನ
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣ ಸಂಬAಧ ಪೊಲೀಸ್ ಅಧಿಕಾರಿಗಳ ವಿರುದ್ಧ ಗೃಹ ಸಚಿವ ಪರಮೇಶ್ವರ್ ಗರಂ ಆಗಿದ್ದಾರೆ.
ನಟ ದರ್ಶನ್ ಅವರು ದಿಂಬು, ಹಾಸಿಗೆಗೆ ಕೋರ್ಟ್ನಲ್ಲಿ ಮನವಿ ಮಾಡುತ್ತಾರೆ. ಆದರೆ ಈ ಕೈದಿಗಳಿಗೆ ಎಲ್ಲವೂ ಸುಲಭವಾಗಿ ಸಿಗುತ್ತದೆ ಎಂದು ಅವರು ಜೈಲಿನಲ್ಲಿರುವ ಅವ್ಯವಸ್ಥೆ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಿದ ವಿಚಾರಕ್ಕೆ ಸಂಬAಧಿಸಿದAತೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪದೇಪದೇ ಹೀಗಾಗುತ್ತದೆ ಎಂದು ಹಿಂದೆಯೂ ಕ್ರಮ ತೆಗೆದುಕೊಂಡಿದ್ದೆವು. ದಯಾನಂದ್ ಅವರ ಜತೆ ನಿನ್ನೆ ಮಾತನಾಡಿದ್ದೇನೆ. ಪದೇ ಇದೇ ಇದು ನಡೆಯುತ್ತಿದೆ. ಯಾರು ಉಸ್ತುವಾರಿ ಇದ್ದಾರೆ ಅವರ ವಿರುದ್ಧ ಕ್ರಮ ಆಗಲೇಬೇಕು. ಇದು ನಾನ್ಸೆನ್ಸ್, ಇದನ್ನೆಲ್ಲ ಸಹಿಸಲು ಸಾಧ್ಯವಿಲ್ಲ ಎಂದರು.
ಈ ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿದ್ದು ದಯಾನಂದ್ ಅವರಿಂದ ವರದಿ ಕೇಳಿದ್ದೇನೆ. ನಾನೇ ಅಧಿಕಾರಿಗಳ ಸಭೆ ಕರೆಯುತ್ತೇನೆ. ದಯಾನಂದ್ ಅವರು ವರದಿ ಕೊಟ್ಟಮೇಲೆ ಪರಿಶೀಲನೆ ನಡೆಸುತ್ತೇವೆ. ವರದಿ ನಮಗೆ ಸಮಾಧಾನ ಆಗದೇ ಇದ್ದರೆ ಉನ್ನತ ಮಟ್ಟದ ತನಿಖೆ ಮಾಡುತ್ತೇವೆ. ತನಿಖೆಗೆ ಸಮಿತಿ ರಚನೆ ಮಾಡುತ್ತೇವೆ ಎಂದು ತಿಳಿಸಿದರು.
ಇದು ಹಳೇ ವಿಡಿಯೋ ಎನ್ನುತ್ತಾರೆ. ಹಿಂದೆನೂ ಹಳೇ ವಿಡಿಯೋ ಬಂದಿತ್ತು. ಏನೇ ಇರಲಿ ಇದು ಯಾವುದೂ ನಡೆಯಬಾರದು. ಇದರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.



