ಬೆಂಗಳೂರು: ರಾಜ್ಯ ಸರ್ಕಾರದ ಬಳಿ ಬರನಿರ್ವಹಣೆ ಮಾಡಲು ಹಣವಿದೆ ಎಂದು ಕಂದಾಯ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ರಾಜ್ಯ ಸರ್ಕಾರದ ಬಳಿ ಹಣವಿಲ್ಲ ಎಂದು ಆರೋಪ ಮಾಡುತ್ತಿರುವ ಬಿಜೆಪಿಯವರ ಟೀಕೆಗಳಿಗೆ ತಿರುಗೇಟು ನೀಡಿರುವ ಅವರು ಜಿಲ್ಲಾಧಿಕಾರಿಗಳ ಬಳಿ 329 ಕೋಟಿ ರೂಪಾಯಿ ಹಣವಿದೆ. ಕುಡಿಯುವ ನೀರಿಗೆ 5 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ಬರ ನಿರ್ವಹಣೆಗೆ ಪ್ರತಿ ತಾಲೂಕಿಗೆ 1 ಕೋಟಿ ರೂಪಾಯಿ ನೀಡಲಾಗಿದೆ ಎಂದು ಮಾಹಿತಿ ನೀಡಿರುವ ಅವರು, ಇಷ್ಟೆಲ್ಲವೂ ಹಣವಿಲ್ಲದೆ ಆಗುತ್ತಿದೆಯೇ ಎಂದು ಪ್ರಶ್ನಿಸಿದ್ದಾರೆ.



