ಕನಕಪುರ: ಕೋಡಿಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಸಮಯ ಕ್ಕೆ ಸರಿಯಾಗಿ ವೈದ್ಯರು ಸಿಗದೆ ರೋಗಿಗಳ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ತಾಲೂಕಿನ ಕೋಡಿಹಳ್ಳಿ ಹೋಬಳಿ ಕೇಂದ್ರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಾಸುಗಟ್ಟಲೆ ಕಾದರೂ ವೈದ್ಯರು ಸಿಗದೇ ರೋಗಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣ ವಾಗಿದ್ದು ಆಸ್ಪತ್ರೆಯಲ್ಲಿ ಖಾಯಂ ವೈದ್ಯರಿಲ್ಲದೆ ಪ್ರಭಾರ ವಾಗಿ ನಿಯೋಜನೆಗೊಂಡಿರುವ ವೈದ್ಯರು ಸಮಯಕ್ಕೆ ಸರಿಯಾಗಿ ಬರುವುದಿಲ್ಲ ಇದರಿಂದ ರೋಗಿಗಳಿಗೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗುತ್ತಿಲ್ಲ ಎಂಬ ಆರೋಪ ಸಾರ್ವಜನಿಕರಿಂದ ಕೇಳಿಬಂದಿದೆ.
ಕೋಡಿಹಳ್ಳಿ ಹೋಬಳಿ ಕೇಂದ್ರದಲ್ಲಿ ಸುಸರ್ಜಿತವಾದ ಪ್ರಾಥಮಿಕ ಆರೋಗ್ಯ ಕೇಂದ್ರವಿದೆ ಆದರೆ ಅದರ ಉಪಯೋಗ ಮಾತ್ರ ಸಾರ್ವಜನಿಕರಿಗೆ ಸಮರ್ಪಕವಾಗಿ ಸಿಗುತ್ತಿಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಯಂ ವೈದ್ಯರನ್ನು ಸರ್ಕಾರ ನಿಯೋಜನೆ ಮಾಡದೆ ಇರುವದ ರಿಂದ ಸಾರ್ವಜನಿಕರಿಗೆ ಬಹಳಷ್ಟು ತೊಂದರೆಯಾಗುತ್ತಿದೆ ಕೋಡಿಹಳ್ಳಿ ಹೋಬಳಿ ಕೇಂದ್ರ ಹ್ತತಾರು ಗ್ರಾಮಗಳಿಗೆ ಸಂಪರ್ಕಕ್ಕೆ ಕೊಂಡಿಯಾಗಿದೆ ಆದರೂ ಇಲ್ಲಿ ರಾತ್ರಿ ವೇಳೆ ಯಲ್ಲಿ ತುರ್ತು ಚಿಕಿತ್ಸಾ ಸೌಲಭ್ಯವೂ ಇಲ್ಲ ರಾತ್ರಿ ವೇಳೆ ತುರ್ತು ಚಿಕಿತ್ಸೆಗೆ ಕನಕಪುರ ನಗರಕ್ಕೆ ಹೋಗಬೇಕಾದ ಅನಿವಾರ್ಯತೆ ಇದೆ ಎಂಬುದು ಸಾರ್ವಜನಿಕರ ದೂರು.
ಕೋಡಿಹಳ್ಳಿ ಹೋಬಳಿ ಕೇಂದ್ರ ಪ್ರತಿನಿತ್ಯ ಸುತ್ತಮುತ್ತಲ ಗ್ರಾಮೀಣ ಭಾಗದ ನೂರಾರು ರೋಗಿಗಳು ಸರ್ಕಾರಿ ಆಸ್ಪತ್ರೆ ಚಿಕಿತ್ಸೆ ಪಡೆದುಕೊಳ್ಳಲು ಬರುತ್ತಾರೆ ಖಾಯಂ ವೈದ್ಯರು ಇಲ್ಲದೆ ಇರುವುದರಿಂದ ಬೇರೊಂದು ಆರೋಗ್ಯ ಕೇಂದ್ರದ ವೈದ್ಯರನ್ನು ಪ್ರಭಾರವಾಗಿ ಇಲ್ಲಿ ನಿಯೋಚನೆ ಮಾಡಿದ್ದಾರೆ ಹಾಗಾಗಿ ವೈದ್ಯರು ತಡವಾಗಿ ಆಸ್ಪತ್ರೆಗೆ ಬರುತ್ತಾರೆ ಹಾಗಾಗಿ ರೋಗಿಗಳು ಸಹ ವೈದ್ಯರಿಗಾಗಿ ಕಾದು ಕುಳಿತುಕೊಳ್ಳಬೇಕು ಕಳೆದ ಗುರುವಾರ ಇಸಿಜಿ ಗಾಗಿ ಹಲವಾರು ಗರ್ಭಿಣಿ ಬಾಣಂತಿಯರು ಕಾದು ಕುಳಿತಿದ್ದರು 11 ಗಂಟೆಯಾದರೂ ವೈದ್ಯರು ಹಾಗೂ ನರ್ಸ್ಗಳು ಸಹ ಆಸ್ಪತ್ರೆಗೆ ಬಂದಿರಲಿಲ್ಲ ಗ್ರಾಮೀಣ ಭಾಗದ ಜನರಿಗೆ ಸಮರ್ಪಕವಾದ ಆರೋಗ್ಯ ಸೇವೆ ಸಿಗುತ್ತಿಲ್ಲ ಎಂಬ ಆರೋಪ ಸ್ಥಳಿಯರಿಂದ ಕೇಳಿ ಬಂದಿದೆ.
ಕೋಡಿಹಳ್ಳಿ ಭಾಗದಲ್ಲಿ ಸರಿಯಾದ ಖಾಸಗಿ ಆಸ್ಪತ್ರೆಗಳ ಸೌಲಭ್ಯವು ಇಲ್ಲ ಖಾಸಗಿ ಆಸ್ಪತ್ರೆಗಳಲ್ಲಿ ನುರಿತ ವೈದ್ಯರು ಗಳಿಲ್ಲ ಹಾಗಾಗಿ ಗ್ರಾಮೀಣ ಭಾಗದ ಜನರು ಸಾರ್ವಜನಿಕ ಆಸ್ಪತ್ರೆಯನ್ನು ನಂಬಿಕೊಂಡಿದ್ದಾರೆ ಆದರೆ ಸರ್ಕಾರಿ ಆಸ್ಪತ್ರೆಯಲ್ಲೂ ಸಮರ್ಪಕವಾದ ಆರೋಗ್ಯ ಸೇವೆ ಸಿಗದೇ ಇರುವುದು ಜನರಿಗೆ ತೊಂದರೆಯಾಗಿದೆ, ಸಂಬಂಧಪಟ್ಟ ಅಧಿಕಾರಿಗಳು ಗ್ರಾಮೀಣ ಭಾಗದಲ್ಲಿ ಸೂಕ್ತ ಆರೋಗ್ಯ ಸೇವೆ ಕೊಡಬೇಕು ಎಂದು ಜನರು ಆಗ್ರಹಿಸಿದ್ದಾರೆ.