ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರ್ ಪುತ್ರ ಮಾಸ್ಟರ್ ಪವನ್ ಬಸ್ರೂರು ಕ್ಲಿಕ್ ಸಿನಿಮಾ ಮೂಲಕ ಪರಿಪೂರ್ಣವಾಗಿ ಚಂದನವನಕ್ಕೆ ಕಾಲಿಟ್ಟಿರುವ “ಕ್ಲಿಕ್” ಚಿತ್ರ ಈ ವಾರ ತೆರೆಗೆ ಬರಲಿದೆ.
ಐಟಿ ಉದ್ಯೋಗಿಯಾಗಿರುವ ಶಶಿಕಿರಣ್ ಸಿನಿಮಾ ಮೇಲಿನ ಅಪಾರ ಪ್ರೀತಿಯಿಂದ ತಮ್ಮದೇ ಶರಣ್ಯ ಫಿಲ್ಮಂಸ್ ನಡಿ ಕ್ಲಿಕ್ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಪವನ್ ಜೊತೆ ಮತ್ತೊಬ್ಬ ಯುವ ನಟ ಕಾರ್ತಿಕ್ ಕೂಡ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಉಳಿದಂತೆ ಚಂದ್ರಕಲಾ ಮೋಹನ್, ರಚನಾ ದಶರತ್, ಸಂಜು ಬಸಯ್ಯ, ಸಿಲ್ಲಿಲಲ್ಲಿ ಆನಂದ್, ಸುಮನಾ ಶಶಿ ಸೇರಿದಂತೆ ಹಲವರು ಚಿತ್ರದ ತಾರಾಬಳಗದಲ್ಲಿದ್ದಾರೆ.
ನಮ್ಮಲ್ಲಿ ಹೆಚ್ಚಿನ ಪಾಲು ಪೋಷಕರು ಮಕ್ಕಳು ಡಾಕ್ಟರ್-ಇಂಜಿನಿಯರ್ ಆಗಬೇಕು ಎಂದು ಬಯಸುತ್ತಾರೆ. ಆದರೆ ಈ ಎರಡು ವಲಯದ ಹೊರತಾಗಿ ನಮ್ಮ ಮುಂದೆ ತುಂಬಾ ಆಯ್ಕೆಗಳಿವೆ. ಮಕ್ಕಳ ಇಚ್ಛೆಗೆ ತಕ್ಕಂತೆ ಓದಲು, ಆಯ್ಕೆ ಮಾಡಲು ಬಿಡಬೇಕು ಎಂಬ ಶಿಕ್ಷಣದ ಕಥೆ ಸುತ್ತ ಕ್ಲಿಕ್ ಸಿನಿಮಾ ಸಾಗುತ್ತದೆ ಎಂದು ನಿರ್ಮಾಪಕ ಶಶಿಕಿರಣ್ ಹೇಳಿದ್ದಾರೆ.ಶಶಿಕುಮಾರ್ ನಿರ್ದೇಶನವಿರುವ ಈ ಚಿತ್ರಕ್ಕೆ ಆಕಾಶ್ ಪರ್ವ-ವಿಶ್ವಾಸ್ ಕೌಶಿಕ್ ಸಂಗೀತ ನಿರ್ದೇಶನ, ಜೀವನ್ ಗೌಡ ಛಾಯಾಗ್ರಹಣ, ವಿನಯ್ ಕುಮಾರ್ ಸಂಕಲನವಿದೆ.