ಬೆಂಗಳೂರು: ಚುನಾವಣೆಗಳಲ್ಲಿ ಅಭ್ಯರ್ಥಿಗಳ ಪರ ಚಲನಚಿತ್ರ ನಟರು ಪ್ರಚಾರ ಮಾಡುವುದು ರಾಜ್ಯಕ್ಕೆ ಹೊಸದೇನು ಅಲ್ಲ. ಈ ಹಿಂದಿನ ಅನೇಕ ಚುನಾವಣೆಗಳಲ್ಲಿ ಚಿತ್ರರಂಗದ ನಟ, ನಟಿಯರು ಅಭ್ಯರ್ಥಿಗಳ ಪರ ಪ್ರಚಾರ ಮಾಡಿದ್ದನ್ನು ನೋಡಬಹುದು. ನಟರನ್ನು ಪ್ರಚಾರದಲ್ಲಿ ತೊಡಗಿಸಿಕೊಳ್ಳಲು ಜಾತಿ, ಭಾಷೆ ಲೆಕ್ಕಾಚಾರವಿರುತ್ತದೆ.
ಇದೀಗ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಪ್ರಚಾರಕ್ಕೆ ತೆಲಗು ಚಿತ್ರರಂಗದ ನಟನನ್ನು ಕರೆತರಲು ಬಿಜೆಪಿ ತಂತ್ರ ರೂಪಿಸಿದೆ.
ಬೆಂಗಳೂರು ದಕ್ಷಿಣ ಲೋಕ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಬೊಮ್ಮನಹಳ್ಳಿ, ಬಿಟಿಎಂ ಲೇಔಟ್, ಹೆಚ್ಎಸ್ಆರ್ ಲೇಔಟ್,ಜಯನಗರ, ಜೆಪಿ ನಗರ, ಬಸವನಗುಡಿ ಸೇರಿದಂತೆ ಕೆಲ ಭಾಗದಲ್ಲಿ ತೆಲುಗು ಭಾಷಿಕರ ಸಂಖ್ಯೆ ಹೆಚ್ಚಾಗಿದೆ.
ಹೀಗಾಗಿ ತೆಲಗು ಚಿತ್ರರಂಗದ ನಟ, ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ ಅವರನ್ನು ಪ್ರಚಾರಕ್ಕೆ ಕರೆತರಲು ಬಿಜೆಪಿ ಚಿಂತನೆ ನಡೆಸಿದ್ದು, ಈ ಸಂಬಂಧ ಶಾಸಕ ಗರುಡಾಚಾರ್ ಅವರ ನಿವಾಸದಲ್ಲಿ ಸಭೆ ನಡೆದಿದೆ ಎಂದು ಹೇಳಲಾಗಿದೆ.