ಬೆಂಗಳೂರು : ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯ ರಾಣಿ ಕ್ರಾಸ್ ಬಳಿ ಪಾದಚಾರಿಗೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ಪಶ್ಚಿಮ ಬಂಗಾಳದ ವ್ಯಕ್ತಿ ಒಬ್ಬ ಮೃತಪಟ್ಟಿರುತ್ತಾನೆ.
ರಾತ್ರಿ ೯ರ ಸುಮಾರಿಗೆ ಖಾಸಗಿ ಹೋಟೆಲ್ನಲ್ಲಿ ಕೆಲಸ ಮಾಡುವ ಅಕ್ಬರ್ ಖಾನ್(೪೬) ಎಂಬಾತ ರಸ್ತೆ ದಾಟುವ ಸಮಯದಲ್ಲಿ ಅಪಘಾತಕ್ಕೀಡಾಗಿ ಮೃತಪಟ್ಟಿರುತ್ತಾನೆ. ದೇವನಹಳ್ಳಿ ಸಂಚಾರಿ ಪೊಲೀಸರು ಅಪಘಾತ ಪ್ರಕರಣ ದಾಖಲು ಮಾಡಿಕೊಂಡಿರುತ್ತಾರೆ.



