ಚಿತ್ರದುರ್ಗ: ರಾಜ್ಯದ್ಯoತ ಮೊದಲ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ಪ್ರಕ್ರಿಯೆಯಾಗಳು ಪ್ರಾರಂಭವಾದವು.ಅದರಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆಗೆ ಜಿಲ್ಲೆಯಾದ್ಯಂತ ಮತದಾನ ಪ್ರಕ್ರಿ ಯೆ ಆರಂಭವಾಗಿದ್ದು, ಬೆಳಗ್ಗೆ ಏಳು ಗಂಟೆಗೆ ಮತದಾರ ರು ಸಾಲುಗಟ್ಟಿ ನಿಂತು ಮತದಾನ ಮಾಡುತ್ತಿ ದ್ದಾರೆ.
ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚಿತ್ರದುರ್ಗ, ಚಳ್ಳಕೆರೆ, ಮೊಳಕಾಲ್ಮೂರು, ಹೊಸದುರ್ಗ, ಹೊಳಲ್ಕೆರೆ, ಶಿರಾ, ಹಿರಿಯೂರು ಮತ್ತು ಪಾವಗಡ ಕ್ಷೇತ್ರಗಳಲ್ಲಿನ ವಿವಿಧ ಮತಗಟ್ಟೆಗಳಲ್ಲಿ ಮತದಾನ ಪ್ರಕ್ರಿಯೆ ಆರಂಭ ಗೊಂಡಿ ತು. ಯುವಕರು,ಮಹಿಳೆ ಯರು, ಹಿರಿಯ ನಾಗರೀಕರು, ವೃದ್ಧರು ಸೇರಿದಂತೆ ಎಲ್ಲ ವಯೋ ಮಾನದವರು ಮತ ದಾನ ಮಾಡಲು ಉತ್ಸಾಹದಿಂದ ಮತಗಟ್ಟೆಗೆ ಆಗಮಿಸಿ ಸರತಿ ಸಾಲಿನಲ್ಲಿ ನಿಂತಿದ್ದರು.
ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಎನ್ಡಿಎ ಮೈತ್ರಿ ಅಭ್ಯರ್ಥಿಗಳ ಮಧ್ಯೆ ನೇರ ಹಣಾಹಣಿ ಏರ್ಪಟ್ಟಿದೆ. ಕಾಂಗ್ರೆಸ್ ಅಭ್ಯರ್ಥಿ ಬಿ ಎನ್.ಚಂದ್ರಪ್ಪ ಹಾಗೂ ಎನ್ ಡಿ ಎ ಮೈತ್ರಿ ಗೋವಿಂದ ಕಾರಜೋಳ ಅವರು ಅಖಾಡದಲ್ಲಿದ್ದಾರೆ.ಚಿತ್ರದುರ್ಗ ಲೋಕಸಭಾ ಕ್ಷೇತ್ರವ್ಯಾಪ್ತಿಯಲ್ಲಿ 18,56,876 ಮತ ದಾರರಿದ್ದು, ಕ್ಷೇತ್ರ ದ ವಿವಿಧ ಮತಗಟ್ಟೆಗಳಿಗೆ ಮತದಾರರು ಮತದಾನ ಕೇಂದ್ರಕ್ಕೆ ಆಗಮಿಸಿ. ಪ್ರಜಾಪ್ರಭುತ್ವ ಹಬ್ಬದಲ್ಲಿ ಪಾಲ್ಗೊಂಡು.ಮತದಾನಮಾಡಿದರು.