ಬೆಂಗಳೂರು: ಬೀದಿ ದೀಪದ ವಿದ್ಯುತ್ ಕಂಬದಿಂದ ವಿದ್ಯುತ್ ಪ್ರವಹಿಸಿ ಸಂಕಷ್ಟದಲ್ಲಿದ್ದ ವ್ಯಕ್ತಿಯನ್ನು ಕಾಪಾಡಲು ಹೋಗಿ ಕೇರಳ ಮೂಲದ ವ್ಯಕ್ತಿಯೊಬ್ಬ ಪ್ರಾಣ ಕಳೆದುಕೊಂಡಿರುವ ಬೆಂಗಳೂರಿನ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೇರಳದ ತ್ರಿಶೂರ್ ಜಿಲ್ಲೆಯ ಮೊಬೈಲ್ ವ್ಯಾಪಾರಿಯಾಗಿದ್ದ ಅಕ್ಬರ್ ಅಲಿ (36) ಮೃತ ದುರ್ದೈವಿ.
ಹೊಸೂರು ರಸ್ತೆಯ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಮುಂದಿನ ವಿದ್ಯುತ್ ಕಂಬದಲ್ಲಿ ವಿದ್ಯುತ್ ಪ್ರವಹಿಸಿ ವ್ಯಕ್ತಿಯೊಬ್ಬ ಬಿದ್ದಿದ್ದ. ಇದನ್ನು ಗಮನಿಸಿದ ಅಲಿ, ಕೂಡಲೇ ಅಪರಿಚಿತ ವ್ಯಕ್ತಿಯ ರಕ್ಷಣೆಗೆ ಧಾವಿಸಿದ್ದಾರೆ. ಅಲ್ಲೇ ಇದ್ದ ದೊಣ್ಣೆಯಿಂದ ಆ ವ್ಯಕ್ತಿಯನ್ನು ನೂಕಿ ಆತನನ್ನು ರಕ್ಷಿಸಿದ್ದಾರೆ. ಆದರೆ ದುರ್ವೈವ ಕೊನೆಗೆ ಅಲಿ ಪ್ರಾಣ ತೆತ್ತಿದ್ದಾರೆ ಎಂದು ತಿಳಿದುಬಂದಿದೆ, ಅಪರಿಚಿತ ವ್ಯಕ್ತಿ ರಕ್ಷಣೆಗೆ ಉಪಯೋಗಿಸಿದ್ದ ಮರದ ಬಡಿಗೆ ಬೀದಿ ದೀಪದ ಕಂಬಕ್ಕೆ ತಾಕಿ ವಿದ್ಯುತ್ ಪ್ರವಹಿಸಿದೆ.
ಪರಿಣಾಮ ಅಲಿ ಮೃತಪಟ್ಟಿದ್ದಾರೆ. ಕೂಡಲೇ ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಇನ್ನು ಇದನ್ನು ಅಸ್ವಾಭಾವಿಕ ಸಾವು ಎಂದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Leave a Review