ಮೈಸೂರು: ಐದು ವರ್ಷಗಳ ಕಾಲ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ ಎಂದು ಸಿದ್ದರಾಮಯ್ಯ ಅವರು ನೀಡಿರುವ ಹೇಳಿಕೆ ಅವರ ವೈಯಕ್ತಿಕ ಹೇಳಿಕೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ವಿಷಯ ಹೈಕಮಾಂಡ್ಗೆ ಬಿಟ್ಟಿದ್ದು, ಯಾರು ಮುಂದುವರಿಯ ಬೇಕು ಎಂಬುದು ಹೈಕಮಾಂಡ್ ನಿರ್ಧರಿಸುತ್ತದೆ. ಈ ವಿಷಯ ಪಕ್ಷದ ಹೈಕಮಾಂಡ್ನ ನಾಲ್ವರ ಮಧ್ಯೆ ಮಾತ್ರ ಮಾತುಕತೆ ನಡೆದಿದ್ದು, ಅವರಿಗೆ ಮಾತ್ರ ಇದರ ಬಗ್ಗೆ ಸ್ಪಷ್ಟತೆ ಇದೆ.
ಎಲ್ಲರಿಗೂ ಮಾತನಾಡುವ ಹಾಗೂ ಅಭಿಪ್ರಾಯ ವ್ಯಕ್ತಪಡಿಸುವ ಸ್ವಾತಂತ್ರ್ಯ ಇದೆ ಎಂದಿರುವ ಅವರು, ಯಾವುದರ ಬಗ್ಗೆಯಾಗಲೀ ಹೈಕಮಾಂಡ್ ತೀರ್ಮಾನವೇ ಅಂತಿಮ. ಒಂದು ವೇಳೆ ನನ್ನನ್ನು ಸಿಎಂ ಆಗು ಎಂದರೆ ನಾನು ಆಗಲು ಸಿಎಂ ಆಗಲು ಸಿದ್ದ ಎಂದಿದ್ದಾರೆ.
ಇದೇ ಸಂದರ್ಭದಲ್ಲಿ ಬಿಜೆಪಿ-ಜೆಡಿಎಸ್ ವಿರುದ್ಧ ವ್ಯಂಗ್ಯದ ದಾಟಿಯಲ್ಲಿ ಮಾತನಾಡಿದ ಪ್ರಿಯಾಂಕ್ ಖರ್ಗೆ ಬಿಜೆಪಿ ಲೀಡರ್ ಲೆಸ್ ಜೆಡಿಎಸ್ ಪೀಪಲ್ ಲೆಸ್ ಪಾರ್ಟಿಗಳು ಎಂದು ಹಾಸ್ಯ ಮಾಡಿದರು.