ನವದೆಹಲಿ: ಮಹತ್ವದ ರಾಜತಾಂತ್ರಿಕ ಬೆಳವಣಿಗೆಯಲ್ಲಿ, ಅಮೆರಿಕಾದ ಡೊನಾಲ್ಡ್ ಟ್ರಂಪ್ ರ್ಕಾರವು ಪ್ರಮುಖ ಭಾರತೀಯ ಸರಕುಗಳ ಮೇಲೆ ಶೇಕಡಾ ೫೦ರಷ್ಟು ಸುಂಕವನ್ನು ವಿಧಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತಮ್ಮ ಮೊದಲ ನೇರ ಸಂಭಾಷಣೆ ನಡೆಸಿದ್ದಾರೆ.
ಇಂದು ಪ್ರಧಾನಿ ಮೋದಿ ಅವರ ೭೫ ನೇ ಹುಟ್ಟುಹಬ್ಬವಾಗಿದ್ದು, ಅದಕ್ಕೆ ಮುನ್ನಾದಿನ ನಿನ್ನೆ ಅಮೆರಿಕ ಅಧ್ಯಕ್ಷರು ಕರೆ ಮಾಡಿ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. ಭಾರತ-ಯುಎಸ್ ಕರ್ಯತಂತ್ರದ ಪಾಲುದಾರಿಕೆಯನ್ನು ಬಲಪಡಿಸುವ ತಮ್ಮ ಬದ್ಧತೆಯನ್ನು ಈ ಸಂರ್ಭದಲ್ಲಿ ಉಭಯ ನಾಯಕರು ಪುನರುಚ್ಚರಿಸಿದರು. ಉಕ್ರೇನ್ನಲ್ಲಿ ನಡೆಯುತ್ತಿರುವ ಸಂರ್ಷದ ಬಗ್ಗೆ ಕೂಡ ರ್ಚಿಸಿದ್ದಾರೆ.
“ನನ್ನ ಸ್ನೇಹಿತ, ಅಮೆರಿಕ ಅಧ್ಯಕ್ಷ ಟ್ರಂಪ್, ನನ್ನ ೭೫ ನೇ ಹುಟ್ಟುಹಬ್ಬಕ್ಕೆ ಕರೆ ಮಾಡಿ ಶುಭಾಶಯ ತಿಳಿಸಿರುವುದಕ್ಕೆ ನಿಮಗೆ ಧನ್ಯವಾದಗಳು ” ಎಂದು ಪ್ರಧಾನಿ ಮೋದಿ ಎಕ್ಸ್ ಪೋಸ್ಟ್ ನಲ್ಲಿ ಬರೆದುಕೊಂಡಿದ್ದಾರೆ.