This is the title of the web page
This is the title of the web page

ರೌಡಿಗಳಿಗೆ ಪೋಲಿಸರ ಬಿಸಿ

ಬೆಂಗಳೂರು: ರೌಡಿ ಶೀಟರ್ ಪಟ್ಟಿಯಲ್ಲಿರುವವರ ಮೇಲೆ ಆಗ್ನೇಯ ವಿಭಾಗದ ಪೊಲೀಸರು ಇಂದು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.
ಆಗ್ನೇಯ ವಿಭಾಗದ ಆಡುಗೋಡಿ ತಿಲಕ್‍ನಗರ, ಹೆಚ್‍ಎಸ್‍ಆರ್ ಲೇಔಟ್, ಪರಪ್ಪನಅಗ್ರಹಾರ, ಕೋರಮಂಗಲ ಪ್ರದೇಶಗಳಲ್ಲಿ ದಾಳಿ ನಡೆಸಿರುವ ಪೊಲೀಸರು ಸುಮಾರು 100 ಜನ ರೌಡಿಗಳಿಗೆ ಬಿಸಿ ಮುಟ್ಟಿಸಿದ್ದಾರೆ.

ಪೊಲೀಸರ ದಾಳಿ ವೇಳೆ ಕೆಲ ರೌಡಿಗಳ ಮನೆಯಲ್ಲಿ ಮಾರಾಕಾಸ್ತ್ರಗಳು ಪತ್ತೆಯಾಗಿವೆ ಎಂದು ಹೇಳಲಾಗಿದೆ. ಚುನಾವಣಾ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳಲ್ಲಿ ಭಾಗಿಯಾಗಬಾರದು ಎಂದು ಎಚ್ಚರಿಕೆ ನೀಡಿರುವ ಪೊಲೀಸರು ಏನಾದರೂ ಅಹಿತಕರ ಘಟನೆ ಸಂಭವಿಸಿದರೆ ಸೂಕ್ತ ಕ್ರಮದ ಎಚ್ಚರಿಕೆ ನೀಡಿದ್ದಾರೆ. ಡಿಸಿಪಿ ಸಿ.ಕೆ. ಬಾವಾ ನೇತೃತ್ವದಲ್ಲಿ ದಾಳಿ ನಡೆದಿದೆ ಎಂದು ಹೇಳಲಾಗಿದೆ.