ಬೆಂಗಳೂರು: ಹಿಜಾಬ್ ವಿಷಯದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಮಧುಬಂಗಾರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮುಂದಿನ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಮತಗಳಿಕೆಗಾಗಿ ರಾಜಕೀಯ ಮಾಡುತ್ತಿದೆ ಎಂದಿರುವ ಅವರು, ಬಿಜೆಪಿಯವರು ಹೀಗೆ ಮಾಡಿದರೆ ಈಗ 67 ಸ್ಥಾನಗಳಿರುವ ಶಾಸಕರು ಮುಂದೆ 37 ಆಗುತ್ತಾರೆ ಎಂದು ಕಿಡಿಕಾರಿದ್ದಾರೆ.
ಹಿಜಾಬ್ ವಿವಾದ ಸೃಷ್ಟಿ ಮಾಡಿದ್ದೇ ಬಿಜೆಪಿಯವರು ಎಂದ ಮಧುಬಂಗಾರಪ್ಪ, ಹಿಜಾಬ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿಯವರು ನೀಡಿರುವ ಹೇಳಿಕೆ ಬಗ್ಗೆ ಅವರೊಂದಿಗೆ ಚರ್ಚೆ ಮಾಡುತ್ತೇವೆ ಎಂದಿದ್ದಾರೆ.