ಬೆಂಗಳೂರು: ಆರೋಪ ಸಾಬೀತು ಪಡಿಸಿದರೆ ರಾಜಕೀಯ ನಿವೃತ್ತಿಯಾಗುವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಇವರೆಲ್ಲಾ ಬ್ಲೂಫಿಲಂ ತೋರಿಸಿ ಮೇಲೆ ಬಂದವರು ಎಂಬ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಆರೋಪ ಮಾಡಿದ ಬೆನ್ನಲ್ಲೆ ಡಿಕೆಶಿ ತಿರುಗೇಟು ನೀಡಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಬ್ಲೂಫಿಲಂ ತೋರಿಸಿದ್ದನ್ನು ಸಾಬೀತು ಮಾಡಿದರೇ ರಾಜಕೀಯದಿಂದ ನಿವೃತ್ತಿಯಾಗುವೆ. ಕುಮಾರಸ್ವಾಮಿಯವರು ಹತಾಶರಾಗಿ ಮಾತನಾಡುತ್ತಿದ್ದಾರೆ.
ಒಬ್ಬ ಮಾಜಿ ಸಿಎಂ ಘನತೆಯಿಂದ ವರ್ತಿಸಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ. ಅಧಿಕಾರ ಹಂಚಿಕೆ ನನಗೆ, ಸಿಎಂ, ವರಿಷ್ಠರಿಗೆ ಸಂಬಂಧಪಟ್ಟ ವಿಚಾರ. ಈ ಹಿಂದೆ ಬಿಜೆಪಿಯವರು ನಮ್ಮ ಗ್ಯಾರಂಟಿ ಬಗ್ಗೆ ಟೀಕೆ ಮಾಡುತ್ತಿದ್ದರು. ಆದರೆ ಈಗ ಅವರೇ ನಮ್ಮ ಗ್ಯಾರಂಟಿ ಯೋಜನೆ ಕಾಪಿ ಮಾಡುತ್ತಿದ್ದಾರೆ ಎಂದಿದ್ದಾರೆ.
2028ರಲ್ಲಿ ರಾಜ್ಯದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ. ಲೋಕಸಭೆ ಚುನಾವಣೆ ಸಂಬಂಧ ಈಗಾಗಲೇ ಸಭೆ ಮಾಡುತ್ತಿದ್ದೇವೆ. ಕೆಲ ಸಚಿವರಿಗೂ ಲೋಕಸಭಾ ಚುನಾವಣೆಗೆ ಸ್ಪರ್ಧಿಸಬೇಕೆಂಬ ಆಸೆ ಇದೆ. ನನಗೂ ಕೂಡ ಪಾರ್ಲಿಮೆಂಟ್ಗೆ ಹೋಗಬೇಕು ಎಂಬ ಆಸೆ ಇದೆ. ಕಾಂಗ್ರೆಸ್ ಜನರ ಬದುಕಿನ ಬಗ್ಗೆ ಯೋಚಿಸುತ್ತದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.