ಬೆಂಗಳೂರು: ಅಶ್ಲೀಲ ವಿಡಿಯೋ ವೈರಲ್ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ, ಜೂನ್ 4 ರಂದು ಆಗಮಿಸುವ ಸಾಧ್ಯತೆಯಿದೆ ಎಂಬ ಮಾಹಿತಿ ಜೆಡಿಎಸ್ ಪಾಳಯದಲ್ಲಿ ಚರ್ಚೆಯಾಗಲಾರಂಭಿಸಿದೆ ಎಂದು ತಿಳಿದುಬಂದಿದೆ.
ಸದ್ಯ ಪ್ರಜ್ವಲ್ ರೇವಣ್ಣರ ವಿರುದ್ಧ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸೆಗಿರುವ ಆರೋಪದಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಅವರು ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ.ಜೂನ್ 4 ರಂದು ಲೋಕಸಭಾ ಚುನಾವಣಾ ಫಲಿತಾಂಶ ಇರುವ ಕಾರಣ, ಅಂದೇ ಅವರು ವಾಪಸ್ ಆಗುತ್ತಾರೆ ಎಂಬ ಮಾಹಿತಿಯ ಬಗ್ಗೆ ಚರ್ಚೆಯಾಗುತ್ತಿದೆ ಎನ್ನಲಾಗುತ್ತಿದೆ.
ಇನ್ನು ಇತ್ತೀಚೆಗೆ ನಡೆದ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ಎನ್ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಅವರು, ಫಲಿತಾಂಶದ ದಿನವೇ ದೇಶಕ್ಕೆ ವಾಪಸ್ ಆಗಲಿದ್ದು, ಬಳಿಕ ಕಾನೂನು ಹೋರಾಟ ಮುಂದುವರೆಸಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.