ನವದೆಹಲಿ: ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್ಪೋರ್ಟ್ ರದ್ದತಿ ಪ್ರಕ್ರಿಯೆ ಚಾಲನೆ ನೀಡಲಾಗಿದೆ ಎಂದು ವಿದೇಶಾಂಗ ಸಚಿವಾಲಯದ ಮೂಲಗಳಿಂದ ತಿಳಿದುಬಂದಿದೆ.
ಕರ್ನಾಟಕ ಸರ್ಕಾರದ ಮನವಿಯ ಬೆನ್ನಲ್ಲೇ ವಿದೇಶಾಂಗ ಸಚಿವಾಲಯ ಪ್ರತಿಕ್ರಿಯಿಸಿದೆ. ಎಸ್ಐಟಿಯಿಂದ ಪಾಸ್ಪೋರ್ಟ್ ರದ್ದತಿ ಮನವಿ ಬಂದಿದೆ. ಹೀಗಾಗಿ ಪಾಸ್ಪೋರ್ಟ್ ರದ್ದತಿಗೆ ಕ್ರಮ ಕೈಗೊಳ್ಳಲಾಗುವುದು. ಕೆಲವೊಂದು ದಾಖಲೆಗಳ ಪರಿಶೀಲನೆ ನಡೆಯುತ್ತಿದೆ ಎನ್ನಲಾಗಿದೆ.ಮಹಿಳೆಯರ ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿ ಪ್ರಜ್ವಲ್ ರೇವಣ್ಣ ತಲೆ ಮರೆಸಿಕೊಂಡಿದ್ದಾರೆ.
ಪ್ರಕರಣ ಸಂಬಂಧ ಎಸ್ಐಟಿ ನೋಟಿಸ್ ಕೊಟ್ಟರೂ ಕ್ಯಾರೇ ಎಂದಿಲ್ಲ. ಈ ಹಿನ್ನೆಲೆಯಲ್ಲಿ ರಾಜತಾಂತ್ರಿಕ ಪಾಸ್ಪೋರ್ಟ್ ರದ್ದು ಮಾಡುವಂತೆ ಕರ್ನಾಟಕ ಸರ್ಕಾರದಿಂದಲೂ ಪ್ರಧಾನಿಯವರಿಗೆ 2 ಬಾರಿ ಪತ್ರ ಬರೆದಿದ್ದರು. ಜೊತೆಗೆ ಎಸ್ಐಟಿ ಕೂಡ ಪತ್ರ ಬರೆದಿತ್ತು.