ಹಾಸನ: ರಾಜ್ಯದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣ ಸಂಬAಧ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳಿದ್ದ ಪೆನ್ಡ್ರೈವ್ ಹಂಚಿಕೆ ವಿಚಾರವಾಗಿ ವಿಶೇಷ ತನಿಖಾ ತಂಡ ಹಾಸನದ ಹಿರಿಯ ಸಿವಿಲ್ ನ್ಯಾಯಾಲಯಕ್ಕೆ ವಿವರವಾದ ಚಾರ್ಜ್ಶೀಟ್ ಸಲ್ಲಿಸಿದೆ.
ಒಟ್ಟು 13,712 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಲಾಗಿದ್ದು, ಈ ಪ್ರಕರಣದಲ್ಲಿ 52 ಜನರ ಹೆಸರು ಉಲ್ಲೇಖಿಸಲಾಗಿದೆ. ಇವರಲ್ಲಿ 39 ಜನರ ವಿರುದ್ಧ ಆರೋಪಗಳು ಸಾಬೀತಾಗಿವೆ ಎಂದು ಎಸ್ಐಟಿ ತಿಳಿಸಿದೆ. 2024ರ ಲೋಕಸಭಾ ಚುನಾವಣೆಯ ವೇಳೆ ಜೆಡಿಎಸ್ ಏಜೆಂಟ್ ಆಗಿದ್ದ ವಕೀಲ ಪೂರ್ಣಚಂದ್ರ ನೀಡಿದ ದೂರಿನ ಆಧಾರದ ಮೇಲೆ ಈ ತನಿಖೆ ಆರಂಭವಾಗಿತ್ತು.
ಅಶ್ಲೀಲ ವಿಡಿಯೋಗಳನ್ನು ಹಂಚಲು ಆರೋಪಿಗಳು ಹಾಸನದಲ್ಲೇ ಸುಮಾರು 70 ಪೆನ್ಡ್ರೈವ್ ಗಳನ್ನು ಖರೀದಿಸಿದ್ದ ವಿಚಾರ ತನಿಖೆಯ ವೇಳೆ ಬಹಿರಂಗವಾಗಿದೆ ಎಂದು ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಲಾಗಿದ್ದು, 277 ಜನ ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸಲಾಗಿದೆ.
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಚಾರ್ಜ್ಶೀಟ್ ಸಲ್ಲಿಕೆ



