ಬೆಂಗಳೂರು: ನಮ್ಮ ಕಿಚ್ಚ ಮಾರಿಕೊಳ್ಳುವವರಲ್ಲ ಎಂದು ನಟ ಪ್ರಕಾಶ್ ರೈ ಹೇಳಿದ್ದಾರೆ. ಸುದೀಪ್ ಅವರು ಬಿಜೆಪಿ ಸೇರುತ್ತಾರೆ ಬಿಜೆಪಿ ಪರ ಪ್ರಚಾರ ಮಾಡುತ್ತಾರೆ ಎಂದು ಕೇಳಿ ಬರುತ್ತಿರುವ ವದಂತಿ ಹಾಗೂ ಸುದ್ದಿಗಳಿಗೆ ಟ್ವಿಟ್ ಮೂಲಕ ಪ್ರತಿಕ್ರಿಯೆ ವ್ಯಕ್ತಪಡಿಸಿರುವ ಪ್ರಕಾಶ್ ರೈ ಅವರು, ಕರ್ನಾಟಕದಲ್ಲಿ ಹತಾಶರಾದ, ಸೋತ ಬಿಜೆಪಿಯಿಂದ ಹರಡಿದ ಸುಳ್ಳು ಸುದ್ದಿ ಇದು ಎಂದು ನಾನು ಬಲವಾಗಿ ನಂಬುತ್ತೇನೆ.
ಕಿಚ್ಚ ಸುದೀಪ್ ಪ್ರಜ್ಞಾವಂತ. ಕರ್ನಾಟಕದಲ್ಲಿ ಸೋಲುವ ಭಯದಲ್ಲಿ, ಭ್ರಷ್ಟ ಬಿಜೆಪಿ ಹರಡುತ್ತಿರುವ ಸುಳ್ಳು ಸುದ್ದಿ ಇದು. ನಮ್ಮ ಕಿಚ್ಚ ಮಾರಿಕೊಳ್ಳುವವರಲ್ಲ? ಎಂದು ಟ್ವೀಟ್‍ನಲ್ಲಿ ಹೇಳಿದ್ದಾರೆ.
Leave a Review