ಹೊಸ ಅಲೆಯ ವಿನೂತನ ಧಾರಾವಾಹಿಗಳನ್ನು ಕನ್ನಡಿಗರಿಗೆ ನೀಡುವಲ್ಲಿ ದಿಟ್ಟ ಹೆಜ್ಜೆ ಇಡುತ್ತಿರುವ ಸ್ಟಾರ್ ಸುವರ್ಣ ವಾಹಿನಿಯು ಇದೀಗ “ಲಕ್ಷ್ಮಿ ಟಿಫನ್ ರೂಮ್” ಎಂಬ ಹೊಸ ಧಾರಾವಾಹಿಯನ್ನು ಪ್ರಸಾರ ಮಾಡುತ್ತಿದೆ.
ಕಥಾ ನಾಯಕಿ ವರಲಕ್ಷ್ಮಿ ನೇರ ನುಡಿಯನ್ನು ಹೊಂದಿದ್ದು ಎಂತಹ ಸಂದರ್ಭದಲ್ಲೂ ಈಕೆ ನ್ಯಾಯದ ಪರ ನಿಲ್ಲುವ ಗಟ್ಟಿಗಿತ್ತಿ.
ಐಎಎಸ್ ಮಾಡಬೇಕೆಂಬ ಕನಸನ್ನು ಕಂಡಿರುತ್ತಾಳೆ. ಆದರೆ ಪರಿಸ್ಥಿತಿಯ ಕೈಗೊಂಬೆಯಾಗಿ, ಹೆಣ್ಣು ಮಕ್ಕಳು ಕೇವಲ ಅಡುಗೆ ಮನೆಗೆ ಸೀಮಿತ ಎಂಬ ಮನಸ್ಥಿತಿಯಿರುವ ಮನೆತನಕ್ಕೆ ಸೊಸೆಯಾಗಿ ಹೋಗುತ್ತಾಳೆ.
ಆ ಮನೆಯ ರೀತಿ ರಿವಾಜುಗಳು, ಕಟ್ಟುಪಾಡುಗಳನ್ನು ಭೇಧಿಸಿ ತನ್ನ ಗಂಡನ ಮನೆಯಲ್ಲಿರುವ ಎಲ್ಲಾ ಸವಾಲುಗಳನ್ನು ಎದುರಿಸಿ, ವರಲಕ್ಷ್ಮಿ ತನ್ನ ಐಎಎಸ್ ಕನಸನ್ನು ನನಸಾಗಿಸುತ್ತಾಳಾ ಈ ಮೂರುಗಂಟಿನ ಬಂಧ, ಅವಳ ಕನಸುಗಳನ್ನು ಕಟ್ಟಿಹಾಕುತ್ತಾ?ಎಂಬುದು ಈ ಧಾರಾವಾಹಿಯ ಮುಖ್ಯ ಕಥಾ ಹಂದರ.
ಹೆಣ್ಣೊಬ್ಬಳು ಕೂಡು ಕುಟುಂಬಕ್ಕೆ ಸೊಸೆಯಾಗಿ ಹೋದಾಗ ತನ್ನ ಕನಸನ್ನು ನನಸಾಗಿಸಲು ಏನೆಲ್ಲಾ ಕಷ್ಟಗಳನ್ನು ಎದುರಿಸಬೇಕಾಗುತ್ತೆ ಎಂಬುದನ್ನು ಈ ಕಥೆಯಲ್ಲಿ ತೋರಿಸಲಾಗಿದೆ. ಪ್ರೀತಿ, ಆಕಾಂಕ್ಷೆಯನ್ನೊಳಗೊಂಡ ವರಲಕ್ಷ್ಮಿಯ ಕಥೆ “ಲಕ್ಷ್ಮಿ ಟಿಫನ್ ರೂಮ್” ಇದೇ ಸೋಮವಾರದಿಂದ 6.30 ಕ್ಕೆ ಸುವರ್ಣ ವಾಹಿನಿಯಲ್ಲಿ ಶುರುವಾಗಿದೆ.