ಬೆಂಗಳೂರು: ಹೊಸ ವರ್ಷಾಚರಣೆ ಸಂಬಂಧ ಕೈಗೊಳ್ಳಬೇಕಾದ ಹಾಗೂ ಕೈಗೊಳ್ಳಬೇಕಾಗಿರುವ ಕ್ರಮಗಳ ಬಗ್ಗೆ ಗೃಹ ಸಚಿವರ ನೇತೃತ್ವದಲ್ಲಿ ಮಹತ್ವದ ಸಮಾಲೋಚನೆ ಸಭೆ ನಡೆದಿದೆ.
ವಿಧಾನಸೌಧದಲ್ಲಿಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಉನ್ನತಮಟ್ಟದ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ್ದಾರೆ.
ಸಭೆಯಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಸೇರಿದಂತೆ ಹಲವು ಉನ್ನತ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದಾರೆ ಎಂದು ಹೇಳಲಾಗಿದೆ.
ಹೊಸವರ್ಷಾಚರಣೆ ದಿನದಂದು ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆಯಿಂದ ಕ್ರಮ ಜರುಗಿಸಬೇಕು ಎಂದು ಅಧಿಕಾರಿಗಳಿಗೆ ಗೃಹಸಚಿವರು ಸೂಚನೆ ನೀಡಿದ್ದಾರೆ.ಈ ಬಗ್ಗೆ ನಿಗಾ ವಹಸುವಂತೆಯೂ ಎಚ್ಚರಿಕೆ ನೀಡಿದ್ದಾರೆ. ಅಆರೋಗ್ಯ ಇಲಾಖೆಯ ಸೂಚನೆಯಂತೆ ಕೊರೊನಾ ಹಿನ್ನೆಲೆ ಅನುಸರಿಸಬೇಕಾದ ಮುಂಜಾಗ್ರತೆ ಬಗ್ಗೆಯೂ ಕ್ರಮ ಕೈಗೊಳ್ಳುವಂತೆ ತಾಕೀತು ಮಾಡಿದ್ದಾರೆ.
ಸಭೆಗೂ ಮುನ್ನಾ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪರಮೇಶ್ವರ್, ಅಗ್ನಿಶಾಮಕದಳ, ಬಿಎಂಟಿಸಿ ಆರೋಗ್ಯ ಇಲಾಖೆ ಸೇರಿದಂತೆ ಹಲವು ಇಲಾಖೆಯ ಪ್ರಮುಖರೊಂದಿಗೆ ಚರ್ಚಿಸಿ ಹೊಸ ವರ್ಷಾಚರಣೆಯಂದು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಮಾಲೋಚನೆ ನಡೆಸಲಾಗುತ್ತಿದೆ ಎಂದು ಸಭೆಯ ಬಗ್ಗೆ ವಿವರ ನೀಡಿದ್ದಾರೆ.