ಯಲಹಂಕ: ಅಯೋಧ್ಯೆಯ ಪವಿತ್ರ ಭೂಮಿಯಲ್ಲಿ ನಿರ್ಮಿಸಿರುವ ಭಗವಾನ್ ಶ್ರೀ ರಾಮ ಮಂದಿರದ ಉದ್ಘಾಟನೆಯ ಹಿನ್ನಲೆ ನಮ್ಮ ಯಲಹಂಕ ಕ್ಷೇತ್ರದಲ್ಲಿ ನಡೆಸಬೇಕಾದ ವಿವಿಧ ಕಾರ್ಯಕ್ರಮಗಳ ಕುರಿತು ಪೂರ್ವಭಾವಿ ಸಭೆಯನ್ನು ಯಲಹಂಕ ಕ್ಷೇತ್ರದ ಶಾಸಕ ಎಸ್ ಆರ್ ವಿಶ್ವನಾಥ್ ನೇತೃತ್ವದಲ್ಲಿ ನಡೆಸಲಾಯಿತು..
ಈ ಸಭೆಯಲ್ಲಿ ಕ್ಷೇತ್ರದಾದ್ಯಂತ ನಡೆಸಬಹುದಾದ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಸಂಭ್ರಮಾಚರಣೆಯ ಕುರಿತು ಚರ್ಚಿಸಲಾಗಿ ಕಾರ್ಯಕರ್ತರು ಮತ್ತು ಮುಖಂಡರ ಸಲಹೆಗಳನ್ನು ಪಡೆದ ಶಾಸಕರು ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ತಿಳಿಸಿದರು.
ಸಭೆಯಲ್ಲಿ ಯಲಹಂಕ ಬಿಜೆಪಿ ಯುವ ನಾಯಕರ ಅಲೋಕ್ ವಿಶ್ವನಾಥ್, ದಿಬ್ಬೂರು ಜಯಣ್ಣ, ಕಡತನ ಮಲೆ ಸತೀಶ್, ಸೇರಿದಂತೆ ಹಲವು ಮುಖಂಡರು ಕಾರ್ಯಕರ್ತರು ಭಾಗವಹಿಸಿದ್ದರು.