ಮಧುಗಿರಿ: ಸಸ್ಯಕಾಶಿ, ಸಿದ್ದರ ತಪೋಭೂಮಿಯಲ್ಲಿ ಜೂ.21ರಂದು ಬಾಳೆಹೊನ್ನೂರು ಖಾಸಾ ಶಾಖಾ ಮಠ, ಸಿದ್ದರಬೆಟ್ಟದ 20ನೇ ವಾರ್ಷಿಕೋತ್ಸವ, ಶ್ರೀಜಗದ್ಗುರು ರೇಣುಕಾಚಾರ್ಯ ಜಯಂತಿ ಹಾಗೂ ಜಗಜ್ಯೋತಿ ಬಸವೇಶ್ವರ ಜಯಂತೋತ್ಸವ ಕಾರ್ಯಕ್ರಮಕ್ಕೆ ಭರದ ಸಿದ್ದತೆಗಳು ನಡೆಯುತ್ತಿವೆ ಎಂದು ಸಿದ್ದರಬೆಟ್ಟ ಬಾಳೆಹೊನ್ನೂರು ಖಾಸಾ ಶಾಖಾ ಶ್ರೀಮಠದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.ಪಟ್ಟಣದ ಬಸವೇಶ್ವರ ದೇವಾಲಯದಲ್ಲಿ ಶ್ರೀಮಠ ಮತ್ತು ಅಖಿಲ ಭಾರತ ವೀರಶೈವ ಮಹಾಸಭಾ ವತಿಯಿಂದ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಧಾರ್ಮಿಕ ಮಹೋತ್ಸವದಲ್ಲಿ ಧರ್ಮಸ್ಥಳದ ಪರಮ ಪೂಜ್ಯ ಡಾ.ಡಿ.ವೀರೇಂದ್ರಹೆಗ್ಗಡೆ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಅವರಿಗೆ 20ನೇ ವರ್ಷದ ಪ್ರತಿಷ್ಠಿತ “ಸಿದ್ದಶ್ರೀ ಪ್ರಶಸ್ತಿ” ಪ್ರಧಾನ ಮಾಡಲಾಗುತ್ತದೆ ಎಂದು ಹೇಳಿದರು.ಸಾಮೂಹಿಕ ವಿವಾಹ ಮತ್ತು ಜನಜಾಗೃತಿ ಧರ್ಮ ಸಮಾರಂಭ: ಶ್ರೀಮಠದ ಪೀಠಾಧ್ಯಕ್ಷರಾದ ಶ್ರೀವೀರಭದ್ರ ಶಿವಾಚಾರ್ಯ ಸ್ವಾಮೀಜಿ ನೇತೃತ್ವ ದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಾಮೂಹಿಕ ವಿವಾಹ, ಜನಜಾಗೃತಿ ಧರ್ಮ ಸಮಾವೇಶ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ತಿಳಿಸಿದರು. ಸಚಿವರಿಗೆ ಆಹ್ವಾನ: ಈ ಕಾರ್ಯಕ್ರಮಕ್ಕೆ ಕರ್ನಾಟಕ ಸರ್ಕಾರದ ಡಿಸಿಎಂ ಡಾ.ಜಿ ಪರಮೇಶ್ವರ, ಕೇಂದ್ರ ಜಲಶಕ್ತಿ ಮತ್ತು ರಾಜ್ಯ ರೈಲ್ವೆ ಖಾತೆ ವಿ.ಸೋಮಣ್ಣ, ಮಧುಗಿರಿ ಶಾಸಕ ಕೆ.ಎನ್ ರಾಜಣ್ಣ ಸೇರಿದಂತೆ ಹಲ ವು ಕ್ಷೇತ್ರದ ಗಣ್ಯರು, ರಾಜಕೀಯ ಮುಖಂಡರು, ಸಾವಿ ರಾರು ಭಕ್ತರು ಭಾಗವಹಿಸುವ ನಿರೀಕ್ಷೆಯಿದೆ ಎಂದರು.
ಕಳೆದ 20 ವರ್ಷಗಳಿಂದ ಶ್ರೀಮಠದಲ್ಲಿ ಭಕ್ತರಿಗೆ ದಾಸೋಹ ವ್ಯವಸ್ಥೆ ಮಾಡಲಾಗುತ್ತಿದೆ. ಭಕ್ತರ ಸಹಕಾರ ದಿಂದ ಮುಂದಿನ ದಿನಗಳಲ್ಲಿ ಪುಣ್ಯಕ್ಷೇತ್ರದ ಆಧಿಪತಿ ಶ್ರೀಸಿದ್ದೇಶ್ವರ ಸ್ವಾಮಿಗೆ ಪ್ರಿಯವಾದ ಹೋಳಿಗೆ ತುಪ್ಪ ಪ್ರಸಾದವನ್ನು ವರ್ಷಪೂರ್ತಿ, ಪ್ರತಿದಿನ ಆಗಮಿಸುವ ಭಕ್ತರಿಗೆ ವಿತರಿಸುವ ಯೋಜನೆ ರೂಪಿಸಲಾಗಿದೆ.ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಎಂ.ಜಿ ಶ್ರೀನಿವಾಸ್ ಮೂರ್ತಿ, ಪುರಸಭೆ ಮಾಜಿ ಅಧ್ಯಕ್ಷ ಲಾಲಪೇಟೆ ಮಂಜುನಾಥ್ ಮಾಜಿ ಸದಸ್ಯ ಕೆ ನಾರಾಯಣ್ ,ನಾಯಕ ಸಂಘದ ತಾಲೂಕು ಅಧ್ಯಕ್ಷ ಮೌಂಟ್ ವ್ಯೂ ಜಗದೀಶ್, ಶಂಕರ ಸೇವಾ ಸಮಿತಿಯ ಅಧ್ಯಕ್ಷ ಬಿ.ಸತ್ಯನಾರಾಯಣ, ಹಿರಿಯರಾದ ಬಿ .ಎಚ್. ಪಂಚಾಕ್ಷರಯ್ಯ,ಕೆ .ವಿ. ಮಂಜುನಾಥ ಗುಪ್ತ, ಎಮ್. ವೆಂಕಟರಾಮ, ನಂಜಮ್ಮ, ಫರ್ನಿಚರ್ ಮಂಜುನಾಥ್ ,ಮೂಡ್ಲ ಗಿರೀಶ್, ಮಧುಮಲ್ಲಘಟ್ಟ, ದ್ವಾರಕನಾಥ್, ಪಿ.ಎಂ .ಸಿದ್ದಪ್ಪ, ನಾಗರಾಜು, ಕಿಶೋರ್ ಶೆಟ್ಟಿ ಇದ್ದರು.
ಸುಕ್ಷೇತ್ರ ಸಿದ್ದರಬೆಟ್ಟ ಮಹೋತ್ಸವಕ್ಕೆ ಸಿದ್ಧತೆ



