ಬೆಂಗಳೂರು: ಈ ತಿಂಗಳ 24ಕ್ಕೆ ಬೆಂಗಳೂರಿಗೆ ಭೇಟಿ ನೀಡುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬೀನ್ ಅವರಿಗೆ ಅದ್ಧೂರಿ ಸ್ವಾಗತ ನೀಡಲು ರಾಜ್ಯ ಬಿಜೆಪಿ ವತಿಯಿಂದ ಸಿದ್ಧತೆ ನಡೆಸಲಾಗುತ್ತಿದೆ.
ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆಗಮಿಸುವ ನಿತಿನ್
ನಬೀನ್ ಅವರನ್ನು ಸುಮಾರು ನಾಲ್ಕೈದು ಸಾವಿರ ಜನರನ್ನು ಸೇರಿಸಿ ಜಯಘೋಷಗಳೊಂದಿಗೆ ಸ್ವಾಗತಿಸಲು ವ್ಯವಸ್ಥೆ ಕಲ್ಪಿಸಲಾಗುತ್ತಿದೆಎಂದು ಹೇಳಲಾಗುತ್ತಿದೆ.
ಬಿಜೆಪಿಯ ರಾಜ್ಯ ಮುಖಂಡರು ಈ ಬಗ್ಗೆ ಸಮಾಲೋಚನೆ ನಡೆಸಿ ನಬೀನ್ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಇದೇ ಮೊದಲ ಬಾರಿಗೆ ರಾಜ್ಯಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಅದ್ಧೂರಿ ಸ್ವಾಗತ ಮಾಡಲು ತೀರ್ಮಾನ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
ಪಕ್ಷದ ಭಾವುಟ ಹಾಗೂ ಬ್ಯಾನರ್ಗಳನ್ನು ಕಟ್ಟಿ ಕೆಂಪೇಗೌಡವಿಮಾನ ನಿಲ್ದಾಣದ ಸುತ್ತಮುತ್ತ ಸಿಂಗರಿಸಲು ವ್ಯವಸ್ಥೆ ಮಾಡಲಾಗುವುದು ಎಂದು ತಿಳಿದುಬಂದಿದೆ.



