ದೇವನಹಳ್ಳಿ : ಪ್ರತಿಯೊಬ್ಬರೂ 5ವರ್ಷದೊಳಗಿನ ತಮ್ಮ ಮಕ್ಕಳಿಗೆ ಲಸಿಕೆ ಹಾಕಿಸಿ, ಅಂಗವಿಕಲತೆ ಬಾರದಂತೆ ನಿಮ್ಮ ಮಕ್ಕಳನ್ನು ರಕ್ಷಿಸಿಕೊಳ್ಳಿ ಎಂದು ಆವತಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಶ್ರೀಮತಿ ಮುನಿರತ್ನಮ್ಮ ತಿಳಿಸಿದರು.
ಅವರು ದೇವನಹಳ್ಳಿ ತಾಲೂಕಿನ ಆವತಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ದೇಶನದಂತೆ ಫಲ್ಸ್ ಪೋಲಿಯೋ ಹಾಕುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಆರೋಗ್ಯವೇ ಭಾಗ್ಯ, ಆರೋಗ್ಯವಂತ ಮಕ್ಕಳು ದೇಶದ ಸಂಪತ್ತು,
ಪೋಲಿಯೊ ಒಂದು ಭಯಾನಕ ರೋಗ ಮಕ್ಕಳಲ್ಲಿ ಶಾಶ್ವತ ಅಂಗವಿಕಲತೆಯನ್ನು ಉಂಟುಮಾಡುತ್ತದೆ, ಈ ರೋಗ 5 ವರ್ಷದೊಳಗಿನ ಮಕ್ಕಳಲ್ಲಿ ಹೆಚ್ಚಾಗಿ ಕಂಡುಬರುತ್ತದೆ ಆದ್ದರಿಂದ ಎಲ್ಲರೂ ತಮ್ಮ ಮಕ್ಕಳಿಗೆ ಲಸಿಕೆ ಹಾಕಿಸಿ ಎಂದರು.ಗ್ರಾಪಂ ಸದಸ್ಯ ನರಸಪ್ಪ ಮಾತನಾಡಿ ಭಾರತ ದೇಶವು ಪೋಲಿಯೊ ಮುಕ್ತ ರಾಷ್ಟ್ರ ಎಂದು 2014 ರಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಘೋಷಿಸಿದೆ,
ಆದರೂ ಕೂಡ ಪಕ್ಕದ ನೆರೆಯ ದೇಶಗಳಲ್ಲಿ 2024 ರಲ್ಲಿ 12 ಪ್ರಕರಣಗಳು ಕಂಡುಬಂದಿದೆ ಎಂದು ವರದಿ ಬಂದಿದೆ, ಈ ಹಿನ್ನೆಲೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಆರೋಗ್ಯ ಇಲಾಖೆಯಲ್ಲಿ ಪಲ್ಸ್ [ಪೋಲಿಯೊಕಾರ್ಯಕ್ರಮವನ್ನು ಕರ್ನಾಟಕ ಆರೋಗ್ಯ ಇಲಾಖೆ ನಿರ್ಧರಿಸಿದೆ ಇದರಲ್ಲಿ ಪ್ರತಿಯೊಬ್ಬ ಜನಪ್ರತಿನಿದಿಗಳು ಭಾಗವಹಿಸಿ ಲಸಿಕೆ ಹಾಕುವ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದರು
ಈ ಸಮಯದಲ್ಲಿ ಆವತಿ ಗ್ರಾ.ಪಂ. ಅಧ್ಯಕ್ಷರಾದ ಮುನಿರತ್ನಮ್ಮ ಉಪಾಧ್ಯಕ್ಷರಾದ ಸೌಭಾಗ್ಯಮ್ಮ, ಸದಸ್ಯರಾದ ನರಸಪ್ಪ, ರತ್ನಮ್ಮ ಹಾಗೂ ಆವತಿ ಗ್ರಾಮದ ಸರ್ಕಾರಿ ಆಸ್ಪತ್ರೆಯ ವೈದ್ಯರು ಮತ್ತು ತಿಲಕ್ ಅಶಾ ಕಾರ್ಯಕರ್ತರು ಭಾಗವಹಿಸಿದ್ದರು.